ರಾಜ್ಯ

ಬೆಂಗಳೂರಿನಲ್ಲಿ ಸರಣಿ ಅಪಘಾತ, ಮೂವರಿಗೆ ಗಾಯ

ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಯಶವಂತಪುರ ರೈಲು ನಿಲ್ದಾಣದ ಬಳಿ ಸಂಭವಿಸಿದೆ.

ಬೆಂಗಳೂರಿನಲ್ಲಿ ಸರಣಿ ಅಪಘಾತ, ಮೂವರಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ 
ಯಶವಂತಪುರ ರೈಲು ನಿಲ್ದಾಣದ ಬಳಿ ಸಂಭವಿಸಿದೆ.

ಕುಡಿದ ಮತ್ತಿನಲ್ಲಿದ್ದ ಮಿನಿ ಬಸ್ ಚಾಲಕನೋರ್ವ ರಸ್ತೆ ಬದಿಯಲ್ಲಿದ್ದ ಆಟೋಗಳಿಗೆ ಡಿಕ್ಕಿ ಹೊಡೆದು ಅವಾಂತರ ಸೃಷ್ಟಿಸಿದ್ದಾನೆ.

ಗೊರೆಗುಂಟೆ ಪಾಳ್ಯ ಕಡೆಯಿಂದ ಸಿಟಿ ಕಡೆಗೆ ಬರುತ್ತಿದ್ದ ಮಿನಿ ಬಸ್ಸು ಚಾಲಕ ವೆಂಕಟಸ್ವಾಮಿ, ಕುಡಿದ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮೂರು ಆಟೋಗಳು ಜಖಂ ಆಗಿದ್ದು ಚಾಲಕರಿಗೆ ತಲೆ, ಕಾಲು, ಕೈ ಭಾಗಗಳಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅದೃಷ್ಟವಶಾತ್ ಬಸ್ಸಿನಲ್ಲಿ ಯಾರೂ ಇರದ ಪರಿಣಾಮ ಅನಾಹುತವೊಂದು ತಪ್ಪಿದಂತಾಗಿದೆ.  ಚಾಲಕ ವೆಂಕಟ ಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿದಂತೆ  ಯಶವಂತಪುರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.