ಪ್ರತ್ಯೇಕ ಪ್ರಕರಣ: ಅನಾರೋಗ್ಯದ ಕಾರಣದಿಂದಾಗಿ ಬಾಲಕಿ ಸೇರಿ ಇಬ್ಬರು ಆತ್ಮಹತ್ಯೆ
ನಗರದಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಬಾಲಕಿ ಸೇರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಂಗಳೂರು: ನಗರದಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಬಾಲಕಿ ಸೇರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಜೆಸಿ ನಗರದ ಕುರುಬರ ಹಳ್ಳಿಯಲ್ಲಿ ಸೋಮವಾರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಉಷಾ (13) ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈಕೆ 7ನೇ ತರಗತಿ ಓದುತ್ತಿದ್ದಳು. ನಿನ್ನೆ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಕುರುಬರಹಳ್ಳಿಯಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಪಿಟೀಲು ವಾದಕ ವಿಶ್ವನಾಥ್ ರಾಥೋಡ್ ಅವರ ಪತ್ನಿ ವಂದನಾ (52) ನೇಣಿಗೆ ಶರಣಾಗಿದ್ದಾರೆ.
ಗರ್ಭಕೋಶ ಹಾಗೂ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ವಂದನಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಹಾಲಕ್ಷ್ಮಿ ಲೇಔಟ್ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


