ಸಂವಿಧಾನದ ಮೂಲಭೂತ ಅಂಶವನ್ನು ಬದಲಿಸಲು ಕೋರ್ಟ್ ಗೆ ಅನುಮತಿ ಇಲ್ಲ: ಮೀಸಲಾತಿ ಕುರಿತ ತೀರ್ಪಿಗೆ ಸಿದ್ದರಾಮಯ್ಯ
ಮೀಸಲಾತಿ ಮೂಲಭುತ ಹಕ್ಕಲ್ಲ ಎಂದಿರುವ ಸುಪ್ರೀಂ ಕೋರ್ಟ್ ಸಂವಿಧಾನದ ಆಶಯದ ವಿರುದ್ಧವಾಗಿ ತೀರ್ಪು ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಮೀಸಲಾತಿ ಮೂಲಭುತ ಹಕ್ಕಲ್ಲ ಎಂದಿರುವ ಸುಪ್ರೀಂ ಕೋರ್ಟ್ ಸಂವಿಧಾನದ ಆಶಯದ ವಿರುದ್ಧವಾಗಿ ತೀರ್ಪು ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಕಚೇರಿಗೆ ಆಗಮಿಸಿದ್ದ ಅವರು ಸಂವಿಧಾನದ ಆರ್ಟಿಕಲ್ ೧೬,/೪ಆರ್ಟಿಕಲ್ ೧೬/೪ಎ ಸೇರಿ ಅನೇಕ ವಿಭಾಗಗಳಲ್ಲಿ ಮೀಸಲಾತಿಯ ಕುರಿತು ಹೇಳಲಾಗಿದ್ದು ಇದು ಸಂವಿಧಾನದಲ್ಲೇ ಅಳವಡಿಕೆಯಾಗಿರುವ ಕಾರಣ ಕೋರ್ಟ್ ಈ ಮೀಸಲಾತಿಗಳ ವಿರುದ್ಧ ಹೇಳುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿರಲಿದೆ ಎಂದರು.
ಯಾರಿಗೆ ಅಗತ್ಯವಿರುತ್ತದೆ ಅವರಿಗೆ ಮೀಸಲಾತಿ ಕೊಡಬೇಕೆಂದು ಸಂವಿಧಾನ ಹೇಳಿದೆ ಆದರೆ ಸುಪ್ರೀಂ ಕೋರ್ಟ್ ಉದ್ಯೋಗ ನೇಮಕಾತಿ ಹಾಗೂ ಭಡ್ತಿಗಳಲ್ಲಿ ಮೀಸಲಾತಿ ನೀಡುವುದು ಮೂಲಭೂತ ಹಕ್ಕಲ್ಲ ಎಂದಿದೆ.ಆದರೆ ಇದು ಅಂತಿಮವಲ್ಲ ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ ಎಲ್ಲವೂ ಸಂವಿಧಾನದ ಮೂಲಭೂತ ಅಂಶಗಳು. ಇದನ್ನು ಸುಪ್ರೀಂ ಕೋರ್ಟ್ ಸಹ ಬದಲಿಸಲು ಸಾಧ್ಯವಿಲ್ಲ ಎಂದು ಅವರು ಹೇಳೀದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


