ಮಾಜಿ ಸಚಿವ ಎಚ್. ಡಿ. ರೇವಣ್ಣ ಆಪ್ತನ ಮನೆ ಮೇಲೆ ಐಟಿ ದಾಳಿ: ವಿಚಾರಣೆಗೆ ಹಾಜರಾಗಲು ಸೂಚನೆ
ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಆಪ್ತರೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಹಾಸನ: ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಆಪ್ತರೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಎಚ್ ಡಿ ರೇವಣ್ಣ ಅವರ ಆಪ್ತ, ಜೆಡಿಎಸ್ ಕಾರ್ಯಕರ್ತ ಹಾಗೂ ಕ್ಲಾಸ್ ಒನ್ ಕಂಟ್ರಾಕ್ಟರ್ ಶಿವಕುಮಾರ್ ಮನೆ ಮೇಲೆ ಎಂಟು ಮಂದಿ ಅಧಿಕಾರಿಗಳ ತಂಡ ಮಂಗಳವಾರ ದಾಳಿ ಮಾಡಿ, ಶೋಧ ನಡೆಸಿದೆ.
ಹಾಸನ ನಗರದ ಸಂಗಮೇಶ್ವರ ಬಡಾವಣೆಯಲ್ಲಿನ ಶಿವಕುಮಾರ್ ಮನೆಯಲ್ಲಿ ನಿನ್ನೆ ಬೆಳಗ್ಗೆ 8 ಗಂಟೆಯಿಂದ ಮಧ್ಯರಾತ್ರಿಯವರೆಗೂ ಅಧಿಕಾರಿಗಳು ಮನೆ ಮೇಲೆ ದಾಳಿ ನಡೆಸಿ, ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನದ ಬೇಲೂರು ರಸ್ತೆಯಲ್ಲಿರುವಐಟಿ ಕಚೇರಿಗೆ ಇಂದು ಹಾಜರಾಗುವಂತೆ ಶಿವಕುಮಾರ್ಗೆ ಅಧಿಕಾರಿಗಳು ಸೂಚಿಸಿದ್ದಾರೆ.
2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯೂ ರೇವಣ್ಣ ಅವರ ಆಪ್ತರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


