ರಾಜ್ಯ

ಒತ್ತಾಯಪೂರ್ವಕವಾಗಿ ಬಂದ್ ಮಾಡಿಸುವಂತಿಲ್ಲ: ಭಾಸ್ಕರ್ ರಾವ್

ರಾಜ್ಯದ ಖಾಸಗಿ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಾಳೆ ಕೆಲವು ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿವೆ.

ಒತ್ತಾಯಪೂರ್ವಕವಾಗಿ ಬಂದ್ ಮಾಡಿಸುವಂತಿಲ್ಲ: ಭಾಸ್ಕರ್ ರಾವ್
ಭಾಸ್ಕರ್ ರಾವ್
Published On :

ಬೆಂಗಳೂರು: ರಾಜ್ಯದ ಖಾಸಗಿ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಾಳೆ ಕೆಲವು ಸಂಘಟನೆಗಳು ಕರ್ನಾಟಕ ಬಂದ್​ಗೆ  ಕರೆ ನೀಡಿವೆ. ಪ್ರತಿಭಟನಾಕಾರರು ಒತ್ತಾಯಪೂರ್ವಕವಾಗಿ ಬಂದ್ ಮಾಡಿಸುವಂತಿಲ್ಲ ಎಂದು  ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ಕನ್ನಡಪರ ಸಂಘಟನೆಗಳು, ವಾಹನ ಚಾಲಕರ ಸಂಘ, ರೈತರ ಸಂಘಟನೆಗಳು, ನೇಕಾರರ ಸಂಘ, ಆಟೋಚಾಲಕರ ಸಂಘ ಸೇರಿದಂತೆ 600ಕ್ಕೂ ಹೆಚ್ಚು ಸಂಘಟನೆಗಳು ನಾಳೆ ಬಂದ್​​ಗೆ ಬೆಂಬಲ ನೀಡಿವೆ. ಆದರೆ ಈ ಸಂಬಂಧ ಅನುಮತಿ ಕೇಳಿ ಯಾವುದೇ ಸಂಘಟನೆ ನಮಗೆ ಮನವಿ ಸಲ್ಲಿಸಿಲ್ಲ. ಈ  ಹಿನ್ನೆಲೆಯಲ್ಲಿ ನಗರದ ಟೌನ್ ಹಾಲ್ ಬಳಿ ಹಾಗೂ ರೈಲ್ವೆ ನಿಲ್ದಾಣ ಬಳಿ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಹಿತಕರ ಘಟನೆ ನಡೆದರೆ ಅದರ ಸಂಪೂರ್ಣ ಹೊಣೆಯನ್ನು ಬಂದ್ ಮಾಡುವವರೇ ಹೊರಬೇಕು. ಸಾರ್ವಜನಿಕರಿಗೆ ತೊಂದರೆ ಕೊಡುವಂತಿಲ್ಲ ಹಾಗೂ ಯಾರಿಂದಲೂ ಒತ್ತಾಯಪೂರ್ವಕವಾಗಿ  ಬಂದ್ ಮಾಡಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಒಂದು ವೇಳೆ ನಿಯಮ ಮೀರಿ ಬಂದ್ ಮಾಡಿಸಿದರೇ ಶಿಸ್ತು ಕ್ರಮ ಜರುಗಿಸುವುದಾಗಿ ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.