ತುಮಕೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು
ಸ್ನೇಹಿತರ ಜೊತೆ ಈಜಲು ತೆರಳಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ.

ತುಮಕೂರು: ಸ್ನೇಹಿತರ ಜೊತೆ ಈಜಲು ತೆರಳಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ.
ಪರಿಶಿಷ್ಟ ಜಾತಿ-ಪಂಗಡದ ಹಾಸ್ಟೆಲ್ ನಲ್ಲಿ ಓದುತ್ತಿದ್ದ 9ನೇ ತರಗತಿಯ ದರ್ಶನ್(13), ಶ್ರೀನಿವಾಸ್(13) ಹಾಗೂ 8ನೇ ತರಗತಿಯ ನಂದನ್(12) ಮೃತ ದುರ್ದೈವಿಗಳು.
ಗುಬ್ಬಿ ಪಟ್ಟಣದ ಕೆರೆಯಲ್ಲಿ ಒಟ್ಟು ಐವರು ಬಾಲಕರು ಈಜಲು ತೆರಳಿದ್ದರು. ಕೆರೆಯಲ್ಲಿ ಈಜುತ್ತಿದ್ದಾಗ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಸಹಾಯದಿಂದ ಗುಬ್ಬಿ ಪೊಲೀಸರು ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


