ಮಂಗಳೂರು: 30 ವರ್ಷಗಳ ದಾಖಲೆ ಮುರಿದ ಕಂಬಳ ಓಟಗಾರ!
ಮೂಡಬಿದಿರೆ ಕಂಬಳದಲ್ಲಿ ಅತ್ಯಂತ ವೇಗವಾಗಿ ಓಡಿರುವ ಶ್ರೀನಿವಾಸ ಗೌಡ 30 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.

ಮಂಗಳೂರು: ಮೂಡಬಿದಿರೆ ಕಂಬಳದಲ್ಲಿ ಅತ್ಯಂತ ವೇಗವಾಗಿ ಓಡಿರುವ ಶ್ರೀನಿವಾಸ ಗೌಡ 30 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
142.50 ಮೀಟರ್ ಉದ್ದದ ಕಂಬಳದ ಕೆಸರು ಗದ್ದೆಯ ಗುರಿಯನ್ನು ಕೇವಲ 13.62 ಸೆಕೆಂಡ್ ಗಳಲ್ಲಿ ತಲುಪಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ ಶ್ರೀನಿವಾಸ್ ಗೌಡ (28). ಈ ಹಿಂದೆ 1990 ರಲ್ಲಿ ಬೆಳ್ತಂಗಡಿಯಲ್ಲಿ ಅತ್ಯಂತ ವೇಗವಾಗಿ ಓಡಿದ್ದ ದಾಖಲೆ ನಿರ್ಮಾಣವಾಗಿತ್ತು.
ಶ್ರೀನಿವಾಸ್ ಗೌಡ ಈ ವರೆಗೂ 12 ಕಂಬಳಗಳಲ್ಲಿ ಭಾಗವಹಿಸಿದ್ದು 29 ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಐಕಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ವಿಭಾಗಗಳಲ್ಲೂ ಬಹುಮಾನ ಗೆಲ್ಲುವ ಮೂಲಕ ಮತ್ತೊಂದು ದಾಖಲೆಯನ್ನೂ ನಿರ್ಮಿಸಿರುವ ಕೀರ್ತಿ ಶ್ರೀನಿವಾಸ್ ಗೌಡ ಅವರಿಗೆ ಸಲ್ಲುತ್ತದೆ.
ಶಾಲಾ ವಿದ್ಯಾಭ್ಯಾಸವನ್ನು ಅರ್ಧಕ್ಕೇ ಬಿಟ್ಟ ಶ್ರೀನಿವಾಸ್ ಗೌಡ, ತಮ್ಮ ಬಾಲ್ಯದಿಂದ ಕಂಬಳದತ್ತ ಆಕರ್ಷಿತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


