ಅಪಘಾತವಾದ ಕಾರಿಗೂ ನಮಗೂ ಸಂಬಂಧವಿಲ್ಲ, ಎಫ್ ಐ ಆರ್ ನಲ್ಲಿ ಪುತ್ರನ ಹೆಸರಿಲ್ಲ: ಆರ್ ಅಶೋಕ್
ಪಘಾತವಾದ ಕಾರಿಗೂ ತಮಗೂ ಯಾವುದೇ ಸಂಬಂಧವಿಲ್ಲ, ಪೊಲೀಸರು ದಾಖಲಿಸಿರುವ ಎಫ್‌ಐಆರ್ ನಲ್ಲಿ ತಮ್ಮ ಪುತ್ರನ ಹೆಸರಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಗುರುವಾರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಅಪಘಾತವಾದ ಕಾರಿಗೂ ತಮಗೂ ಯಾವುದೇ ಸಂಬಂಧವಿಲ್ಲ, ಪೊಲೀಸರು ದಾಖಲಿಸಿರುವ ಎಫ್‌ಐಆರ್ ನಲ್ಲಿ ತಮ್ಮ ಪುತ್ರನ ಹೆಸರಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಗುರುವಾರ ಸ್ಪಷ್ಟಪಡಿಸಿದ್ದಾರೆ.
ಬಳ್ಳಾರಿಯಲ್ಲಿ ಸೋಮವಾರದಂದು ನಡೆದ ಅಪಘಾತವೊಂದರಲ್ಲಿ ಪಾದಚಾರಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, "ಅಪಘಾತದಲ್ಲಿ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಘಟನೆ ನಿಜಕ್ಕೂ ಬೇಸರ ತರಿಸಿದೆ ಎಂದು ಅವರು ಹೇಳಿದರು. ಅಪಘಾತಕ್ಕೀಡಾದ ಕಾರಿನಲ್ಲಿ ನಿಮ್ಮ ಪುತ್ರ ಇರಲಿಲ್ಲವೇ ಎಂಬ ಎಂಬ ಮಾಧ್ಯಮಗಳ ಪ್ರಶ್ನೆಗೆ ಅವರು ಪ್ರಕರಣ ಕುರಿತು ಪೊಲೀಸರ ತನಿಖೆ ನಡೆಯುತ್ತಿದೆ, ಈ ಹಂತದಲ್ಲಿ ತಾವು ಯಾವುದೇ ಹೇಳಿಕೆ ನೀಡುವುದಿಲ್ಲ ತನಿಖೆ ಮುಗಿದ ನಂತರ ಎಲ್ಲ ಮಾಹಿತಿಯೂ ಲಭ್ಯವಾಗಲಿದೆ ಎಂದು ಹೇಳಿದರು.
ಮಂತ್ರಿಯಾಗಿ ನಾನು ಪ್ರತಿಕ್ರಿಯಿಸುತ್ತಿಲ್ಲ. ಕೆಲ ಮಾಧ್ಯಮದಲ್ಲಿ ಕೆಲವು ವಿಚಾರಗಳು ಬಂದಿವೆ. ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಸತ್ಯಾಂಶ ಹೊರಬರುತ್ತದೆ ಎಂಬ ವಿಶ್ವಾಸವಿದೆ. ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ತಪ್ಪಿಗೆ ತಕ್ಕ ಶಿಕ್ಷೆಯಾಗಲಿ ಎಂದು ಆರ್ ಅಶೋಕ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


