ಆನಂದ್ ಸಿಂಗ್ ಗೆ ಅರಣ್ಯ ಖಾತೆಗೆ 'ಕ್ಯಾತೆ': ಸಚಿವ ಸ್ಥಾನದಿಂದ ತೆಗೆಯುವಂತೆ ಒತ್ತಾಯ
ಆನಂದ್ ಸಿಂಗ್ ಅವರನ್ನು ಖಾತೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸಹಿ ಅಭಿಯಾನ ಆರಂಭಿಸಲಾಗಿದೆ. ಈ ಸಂಬಂಧ ಸಿಎಂಗೆ ಮನವಿ ಕೂಡ ಸಲ್ಲಿಸಲಾಗಿದೆ.

ಬೆಂಗಳೂರು: ಶಾಸಕ ಆನಂದ್ ಸಿಂಗ್, ಅರಣ್ಯ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಹಲವಾರು ಮಂದಿ ವಿರೋಧ ವ್ಯಕ್ತ ಪಡಿಸಿದ್ದಾರೆ.
ಆನಂದ್ ಸಿಂಗ್ ಅವರನ್ನು ಖಾತೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸಹಿ ಅಭಿಯಾನ ಆರಂಭಿಸಲಾಗಿದೆ. ಈ ಸಂಬಂಧ ಸಿಎಂಗೆ ಮನವಿ ಕೂಡ ಸಲ್ಲಿಸಲಾಗಿದೆ.
ಸಿಎಂ ಯಡಿಯೂರಪ್ಪ ಯಾರೂ ಯೋಜಿಸಲಾಗದಂತ ಕೆಲಸ ಮಾಡಿದ್ದಾರೆ. ಅರಣ್ಯ ಇಲಾಖೆಯೇ ಹಲವು ಪ್ರಕರಣಗಳ ಸಂಬಂಧ 15 ಕೇಸ್ ದಾಖಲಿಸಿದೆ, ಅಂತವರಿಗೆ ಅರಣ್ಯ ಖಾತೆ ನೀಡಿದ್ದಾರೆ, ಎಂದು ಚೇಂಜ್.org ಅರ್ಜಿ ಸಲ್ಲಿಸಿದೆ,. ಆನಂದ್ ಸಿಂಗ್ ರಾಜಿನಾಮೆ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕೇವಲ 2 ಗಂಟೆಗಳಲ್ಲಿ 130 ಸಹಿ ಸಂಗ್ರಹವಾಗಿವೆ,
ಆನಂದ್ ಸಿಂಗ್ ವಿರುದ್ದ ದಾಖಲಾಗಿರುವ ಕೇಸ್ ಗಳ ಸಂಬಂಧ ಅರಣ್ಯ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಯಡಿಯೂರಪ್ಪ ಮತ್ತು ಕರ್ನಾಟಕ ಬಿಜೆಪಿ ಸರ್ಕಾರ ಮಾಡಿದ ಉದ್ದೇಶಪೂರ್ವಕ ತಪ್ಪಿನಿಂದಾಗಿ ಜನತೆಗೆ ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸ ಹೋಗಿದೆ ಎಂದು ಹೇಳಲಾಗಿದೆ.
ಅರಣ್ಯ ಇಲಾಖೆಯ ಹಲವು ಅಧಿಕಾರಿಗಳು ಆನಂದ್ ಸಿಂಗ್ ನೇಮಕಕ್ಕೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಆದರೆ ಸಿಎಂ ನಿರ್ಧಾರ ನಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


