ಆಕಸ್ಮಿಕ ಬೆಂಕಿ ತಗುಲಿ ತಂದೆ-ಮಗ ಸಾವು
ಒಲೆ ಹಚ್ಚುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ತಂದೆ-ಮಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು: ಒಲೆ ಹಚ್ಚುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ತಂದೆ-ಮಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಈಶ್ವರ ಬಡಾವಣೆಯಲ್ಲಿ ಗುರುವಾರ ತಡರಾತ್ರಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ತಂದೆ ರೇಣುಕಾಸ್ವಾಮಿ ಮತ್ತು ಮಗ ತೇಜಸ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರೇ, ಪತ್ನಿ ಪುಷ್ಪಲತಾ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಂದೆ ರೇಣುಕಾಸ್ವಾಮಿ ಮತ್ತು ಮಗ ತೇಜಸ್ ಮೃತದುರ್ದೈವಿಗಳು. ತಾಯಿ ಪುಷ್ಪಲತಾ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ರೇಣುಕಾಸ್ವಾಮಿ ಸಶಸ್ತ್ರ ಮೀಸಲು ಪಡೆಯ ಮುಖ್ಯ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಕೆ.ಆರ್.ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


