ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರು ಪಾಲು
ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ಯುವಕರು ಜಲ ಸಮಾಧಿ ಯಾಗಿರುವ ಘಟನೆ ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದ ಬಳಿಯ ಕಾವೇರಿ ನದಿಯಲ್ಲಿಂದು ನಡೆದಿದೆ.

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ಯುವಕರು ಜಲ ಸಮಾಧಿ ಯಾಗಿರುವ ಘಟನೆ ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದ ಬಳಿಯ ಕಾವೇರಿ ನದಿಯಲ್ಲಿಂದು ನಡೆದಿದೆ.
ಮುಜಾಸಿಮ್ ಅಹಮದ್(18) ತೌಸೀಫ್(17)ಇಫ್ತಿಹಾರ್(18) ಮೃತ ದುರ್ದ್ಯವಿಗಳಾಗಿದ್ದು ಮೃತರೆಲ್ಲರು ಹಾಸನದ ಅರಸೀಕೆರೆ ಮೂಲದವರಾಗಿದ್ದು ಮೈಸೂರಿನ ಸಿದ್ದಿಕ್ ಮೊಹಲ್ಲಾದ ತಾರುಮುಲ್ಲಾ ಸಿದ್ದಿಕ್ ಟ್ರಸ್ಟ್ ನಲ್ಲಿ ಅರೇಬಿಕ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಇಂದು ಮೀನು ಹಿಡಿಯಲು ಬಂದಿದ್ದವರು ಈಜಲು ಹೋಗಿದ್ದ ವೇಳೆ ಮೃತ ಪಟ್ಟಿರಬಹುದೆಂದ ಪೊಲೀಸರು ಶಂಕೆವ್ಯಕ್ತಪಡಿಸಿದ್ದಾರೆ. ಮೂವರಲ್ಲಿ ಮುಜಾಸೀಮ್ ಶವ ಬೆಳಿಗ್ಗೆ ಪತ್ತೆಯಾಗಿದ್ದು ಉಳಿದ ಇಬ್ಬರ ಶವಗಳು ಮಧ್ಯಾಹ್ನದ ಬಳಿಕ ಪತ್ತೆಯಾಗಿವೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ನಾಗಯ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


