ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವರಿಗೆ ಶಿಕ್ಷಣ ಸಚಿವರಿಂದ ಮನವಿ
ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯನ್ನು ತೋರಿಸಿದರೆ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುವಾಗುವಂತೆ ಸೂಕ್ತ ಸುತ್ತೋಲೆ ಹೊರಡಿಸುವಂತೆ ಪ್ರಾಥಮಿಕ...

ಬೆಂಗಳೂರು: ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯನ್ನು ತೋರಿಸಿದರೆ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುವಾಗುವಂತೆ ಸೂಕ್ತ ಸುತ್ತೋಲೆ ಹೊರಡಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರಿಗೆ ಮನವಿ ಮಾಡಿದ್ದಾರೆ.
ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ ತಿಂಗಳಿನಿಂದ ಪ್ರಾರಂಭಗೊಳ್ಳಲಿವೆ. ಪ್ರತಿದಿನ ತಮ್ಮ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪಡೆದುಕೊಂಡಿರುವ ಬಸ್ ಪಾಸ್ ಗಳಲ್ಲಿ ನಿಗದಿತ ಅಂದರೆ ತಮ್ಮ ಪಾಸ್ ನಲ್ಲಿ ನಮೂದಿತ ಮಾರ್ಗಗಳ ಹೊರತಾಗಿಯೂ ಬದಲಾದ ಮಾರ್ಗಗಳಲ್ಲಿ ಸಂಚರಿಸಲು ಅನುವಾಗುವಂತೆ ಅವಕಾಶ ಮಾಡಿಕೊಡಲು ಸಚಿವರು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


