ಹುಬ್ಬಳ್ಳಿಯಲ್ಲಿ ಪಾಕ್ ಪರ ಘೋಷಣೆ: ದೇಶದ್ರೋಹ ಕೇಸ್ ಹಾಕಿದ್ದರೂ ಮೂವರು ವಿದ್ಯಾರ್ಥಿಗಳ ಬಿಡುಗಡೆ!
ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣದಡಿ ಬಂಧಿಸಲಾಗಿದ್ದ ಹುಬ್ಬಳ್ಳಿಯ ಕೆಎಲ್ಇ ಕಾಲೇಜಿನ ವಿದ್ಯಾರ್ಥಿಗಳನ್ನು ಪೊಲೀಸರು ಬಾಂಡ್ ಬರೆಸಿಕೊಂಡು ಬಿಡುಗಡೆ ಮಾಡಿದೆ.

ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣದಡಿ ಬಂಧಿಸಲಾಗಿದ್ದ ಹುಬ್ಬಳ್ಳಿಯ ಕೆಎಲ್ಇ ಕಾಲೇಜಿನ ವಿದ್ಯಾರ್ಥಿಗಳನ್ನು ಪೊಲೀಸರು ಬಾಂಡ್ ಬರೆಸಿಕೊಂಡು ಬಿಡುಗಡೆ ಮಾಡಿದೆ.
ಸೆಕ್ಷನ್ 169ರ ಅಡಿ ಬಾಂಡ್ ಬರೆಸಿಕೊಂಡು ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದ್ದು ಪೊಲೀಸರ ಈ ಕಾರ್ಯ ಸಾಕಷ್ಟು ಅನುಮಾನ ಮೂಡಿಸಿವೆ.
ಕರೆದಾಗಲೆಲ್ಲಾ ಬಂದು ವಿಚಾರಣೆಗೆ ಸಹಕರಿಸಬೇಕು ಎಂದು ಬಾಂಡ್ ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ.
ಸೆಕ್ಷನ್ 124ಎ ಜಾಮೀನು ರಹಿತ ಕೇಸ್ ಆಗಿದ್ದರೂ ವಿದ್ಯಾರ್ಥಿಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾಶ್ಮೀರದ ಶೋಫಿಯಾನ ಜಿಲ್ಲೆಯ ಆಮಿರ್ ಮೊಹಿದ್ದೀನ್ ವಾನಿ, ಬಾಸೀತ್ ಆಸೀಫ್ ಸೋಫಿ, ತಾಲಿಬ ಮಾಜಿದ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದರು. ಇನ್ನು ಈ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಸಹ ಅಮಾತು ಮಾಡಿತ್ತು.
ಭಾರತ ಸರ್ಕಾರದ ವಿದ್ಯಾರ್ಥಿ ವೇತನ ಪಡೆದು ಕಾಶ್ಮೀರ ಮೂಲದ ಈ ವಿದ್ಯಾರ್ಥಿಗಳು ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


