ಲಾರಿ ಮುಖಾಮುಖಿ ಡಿಕ್ಕಿ: ಮೂವರು ಸಾವು
ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಗರಸಂಗಿ ಕ್ರಾಸ್ ಬಳಿ ಸಂಭವಿಸಿದೆ.

ವಿಜಯಪುರ: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಗರಸಂಗಿ ಕ್ರಾಸ್ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ವಿಜಯಪುರ ದಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಲಾರಿಗೆ, ಹುಬ್ಬಳ್ಳಿ ಯಿಂದ ವಿಜಯಪುರದೆಡೆಗೆ ತೆರಳುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 218ಯಲ್ಲಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು ನಾಗಠಾಣದ ದಾವಲ್‌ಸಾಬ ಹಾಜಿಸಾಬ ಅತ್ತಾರ (32), ಇಂಡಿ ತಾಲೂಕಿನ ಅಥರ್ಗಾದ ಕಾಸು ಚಂದ್ರಾಮ ಅಹಿರವಾಡಗಿ (36) ಹಾಗೂ ಮಧ್ಯಪ್ರದೇಶದ ಜಗದೀಶ ರಾಮಚಂದ್ರ ಬಾಮಾ (65) ಎಂದು ಗುರುತಿಸಲಾಗಿದೆ.
ವಿಜಯಪುರದಿಂದ ಹುಬ್ಬಳ್ಳಿ ಕಡೆಗೆ ಬೆಳ್ಳುಳ್ಳಿ ಮತ್ತು ತೆಂಗಿನಕಾಯಿ ಸಾಗಿಸುತ್ತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ. ಕರ್ನಾಟಕ ಮೂಲದ ಲಾರಿಯಲ್ಲಿದ್ದ ಇಬ್ಬರು ಹಾಗೂ ಮಧ್ಯಪ್ರದೇಶದ ಲಾರಿಯಲ್ಲಿದ್ದ ಒಬ್ಬ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ. ಕೊಲ್ಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


