ಕಾರಿಗೆ ಸರ್ಕಾರಿ ಬಸ್ ಢಿಕ್ಕಿ: ಪ್ರಾಣಾಪಾಯದಿಂದ ಚಿತ್ರದುರ್ಗ ಡಿಸಿ ವಿನೋತ್ ಪ್ರಿಯಾ ಪಾರು
ಚಿತ್ರದುರ್ಗ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ಬಳಿ ವರದಿಯಾಗಿದೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ಬಳಿ ವರದಿಯಾಗಿದೆ.
ಕಾರಿನ ಏರ್‌ಬ್ಯಾಗ್ ತೆರೆದುಕೊಂಡ ಪರಿಣಾಮ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಚಾಲಕ ಮನ್ಸೂರ್ ಹಾಗೂ ಗನ್ ಮ್ಯಾನ್ ನವೀನ್ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ವಿನೋತ್ ಪ್ರಿಯಾ ಅವರು ಚಿತ್ರದುರ್ಗದಿಂದ ಹೊಳಲ್ಕೆರೆಗೆ ತೆರಳುತ್ತಿದ್ದಾಗ, ಹೊಳಲ್ಕೆರೆಯಿಂದ ಚಿತ್ರದುರ್ಗಕ್ಕೆ ಸಾರಿಗೆ ಬಸ್ಸೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಜಾನುವಾರು ಏಕಾಏಕೀ ರಸ್ತೆಗೆ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆಯ ಬಳಿಕ ಬಸ್ಸನ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರಿನ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರ ಕೈ ಬೆರಳಿಗೂ ಚಿಕ್ಕ ಗಾಯವಾಗಿದ್ದು, ಚಿಕಿತ್ಸೆ ತೆಗೆದುಕೊಂಡು ಬಳಿಕ ಬೇರೆ ಕಾರಿನಲ್ಲಿ ಚಿತ್ರದುರ್ಗಕ್ಕೆ ವಾಪಾಸ್ಸಾದರು. ಘಟನೆಗೆ ಸಂಬಂಧಿಸಿದಂತೆ ಚಿತ್ರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


