ರಾಜ್ಯ

ಬೆಂಗಳೂರು: ಚಿನ್ನಾಭರಣ ಸಮೇತ ಓಮ್ನಿ ಕಳವು, ಸಿಸಿಟಿವಿಯಲ್ಲಿ ಸೆರೆ

ಮದುವೆ ಛತ್ರದಿಂದಲೇ ಚಿನ್ನಾಭರಣವಿದ್ದ ಓಮ್ನಿ ಕದ್ದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ನಡೆದಿದೆ.

ಬೆಂಗಳೂರು: ಚಿನ್ನಾಭರಣ ಸಮೇತ ಓಮ್ನಿ ಕಳವು, ಸಿಸಿಟಿವಿಯಲ್ಲಿ ಸೆರೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಮದುವೆ ಛತ್ರದಿಂದಲೇ ಚಿನ್ನಾಭರಣವಿದ್ದ ಓಮ್ನಿ ಕದ್ದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ನಡೆದಿದೆ.

ವರ, ಸಹೋದರನ ಚಿನ್ನಾಭರಣ ಸಮೇತ ಓಮ್ನಿ ಕದ್ದು ದುಷ್ಕರ್ಮಿಗಳು ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ‌.

ಬೆಂಗಳೂರು ಉತ್ತರ ತಾಲೂಕಿನ ಲಿಂಗ ಹಳ್ಳಿಯ ರವಿ ಅವರ ಓಮ್ನಿ ವಾಹನವಾಗಿದ್ದು, ಸೋದರ ಪ್ರವೀಣ್ ಮದುವೆ ಹಿನ್ನೆಲೆಯಲ್ಲಿ ಛತ್ರ ಕ್ಕೆ ಆಗಮಿಸಿದ್ದರು. ಊಟ ಮಾಡವುದಕ್ಕೆ ತೆರಳಬೇಕಾದ ಹಿನ್ನೆಲೆಯಲ್ಲಿ ಚಿನ್ನಾಭರಣವನ್ನು ಓಮ್ನಿಯಲ್ಲಿಟ್ಟು ಪಾರ್ಕಿಂಗ್ ಮಾಡಿದ್ದರು‌. ಊಟ ಮುಗಿಸಿಕೊಂಡು ವಾಪಸ್ಸಾದಾಗ ಓಮ್ನಿ ಆ ಸ್ಥಳದಲ್ಲಿ ಇರಲಿಲ್ಲ. ಹತ್ತಿರದಲ್ಲಿದ್ದ ಪರಿಶೀಲಿಸಿದಾಗ ಓಮ್ನಿ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ‌.

ಘಟನೆಗೆ ಸಂಬಂಧಿಸಿದಂತೆ  ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.