ಸಾರಿಗೆ ನೌಕರರ ಧರಣಿ: ನಾಳೆ ಬಿಎಂಟಿಸಿ, ಕೆಎಸ್ಆರ್'ಟಿಸಿ ಬಸ್ ಗಳು ರಸ್ತೆಗಿಳಿಯುವುದು ಅನುಮಾನ
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸೇಕೆಂದು ಆಗ್ರಹಿಸಿ ಗುರುವಾರ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ಕುಟುಂಬ ಸಮೇತ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಬಿಎಂಟಿಸಿ ಹಾಗೂ ಕೆಎಸ್ಆರ್'ಟಿಸಿ ಬಸ್ ಗಳು ರಸ್ತೆಗಿಳಿಯುವುದು ಅನುಮಾನವೆಂದು ಹೇಳಲಾಗುತ್ತಿದೆ.

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸೇಕೆಂದು ಆಗ್ರಹಿಸಿ ಗುರುವಾರ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ಕುಟುಂಬ ಸಮೇತ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಬಿಎಂಟಿಸಿ ಹಾಗೂ ಕೆಎಸ್ಆರ್'ಟಿಸಿ ಬಸ್ ಗಳು ರಸ್ತೆಗಿಳಿಯುವುದು ಅನುಮಾನವೆಂದು ಹೇಳಲಾಗುತ್ತಿದೆ.
ಸುಮಾರು 20 ಸಾವಿರಕ್ಕೂ ಹೆಚ್ಚು ಸಾರಿಗೆ ಸಿಬ್ಬಂದಿ ನಾಳೆ ಫ್ರೀಡಂಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆಂದು ವರದಿಗಳುಗಳು ತಿಳಿಸಿವೆ.
ಪಾಟೀಲ ಪುಟ್ಟಪ್ಪ ಹಾಗೂ ಜಯಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರ ಪ್ರತಿಭಟನೆ ನಡೆಸಲಿದ್ದಾರೆ.
ಸರ್ಕಾರಿ ನೌಕರರು ಹಾಗೂ ನಿಗಮ ಮಂಡಳಿಗಳ ನೌಕರರ ವೇತನದಲ್ಲಿ ಸಾಕಷ್ಟು ವ್ಯತ್ಯಾಸಗಳಿದೆ. ಅಲ್ಲದೆ, ಸರ್ಕಾರಿ ನೌಕರರಿಗೆ ಸಿಗುತ್ತಿರುವ ಸವಲತ್ತುಗಳು ಕೂಡ ನೀಡಲಾಗುತ್ತಿಲ್ಲ. ನಿಗಮಮಂಡಳಿಗಳು ಆರ್ಥಿಕ ತೊಂದರೆಯಲ್ಲಿರುವುದರಿಂದ ಈ ಸೌಲಭ್ಯ ನೀಡಲಾಗುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


