ಮೈಸೂರು: ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು, ಪರಿಶೀಲನೆಗೆ ಪುರಾತತ್ವ ಸಮಿತಿ ರಚನೆ
ಇಲ್ಲಿನ ಚಾಮುಂಡಿ ಬೆಟ್ಟದಲ್ಲಿರುವ ಸುಮಾರು 400 ವರ್ಷಗಳಷ್ಟು ಪುರಾತನವಾದ ನಂದಿ ವಿಗ್ರಹದಲ್ಲಿ ಬಿರುಕುಗಳು ಕಾಣಿಸಿಕೊಂಡಿದೆ ಎಂಬ ದೂರುಗಳನ್ನು ಪರಿಶೀಲಿಸಲು ಪುರಾತತ್ವ ಇಲಾಖೆಯ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಮೂಲಗಳು ಬುಧವಾರ ಹೇಳಿವೆ.

ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದಲ್ಲಿರುವ ಸುಮಾರು 400 ವರ್ಷಗಳಷ್ಟು ಪುರಾತನವಾದ ನಂದಿ ವಿಗ್ರಹದಲ್ಲಿ ಬಿರುಕುಗಳು ಕಾಣಿಸಿಕೊಂಡಿದೆ ಎಂಬ ದೂರುಗಳನ್ನು ಪರಿಶೀಲಿಸಲು ಪುರಾತತ್ವ ಇಲಾಖೆಯ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಮೂಲಗಳು ಬುಧವಾರ ಹೇಳಿವೆ.
ಇದಕ್ಕೂ ಮೊದಲು ಕಳೆದ ಜನವರಿಯಲ್ಲಿ ಮೈಸೂರು ಪಾರಂಪರಿಕಾ ಸಮಿತಿ ಸದಸ್ಯ ಹಾಗೂ ಇತಿಹಾಸಕಾರ ಪ್ರೋ. ಎನ್.ಎಸ್. ರಂಗರಾಜು ವಿಗ್ರಹದ ಮೇಲೆ ಕಾಣಿಸಿಕೊಂಡಿರುವ ಬಿರುಕುಗಳನ್ನು ಪತ್ತೆ ಹಚ್ಚಿ, ಐತಿಹಾಸಿಕ ನಂದಿ ವಿಗ್ರಹ ಮತ್ತಷ್ಟು ಹಾನಿಗೊಳ್ಳುವುದನ್ನು ತಡೆಯಲು ಸೂಕ್ತ ನಿಗ್ರಹ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದರು.
ನಂದಿ ಪ್ರತಿಮೆಯ ಬಲ ತೊಡೆಯ ಬಳಿ ಮತ್ತು ಏಕಶಿಲೆಯಲ್ಲಿ ಕೆತ್ತಿದ ಮುಖದಲ್ಲಿ ಬಿರುಕುಗಳನ್ನು ರಂಗರಾಜು ಅವರು ಪತ್ತೆ ಹಚ್ಚಿದ್ದರು. ನಾಲ್ವಡಿ ಕೃಷ್ಣರಾಜ ಓಡೆಯರ್ ಅವರ ನೆನಪಿಗಾಗಿ ದಿ. ಸರ್ ಎಂ. ವಿಶ್ವೇಶ್ವರಯ್ಯ ನಂದಿ ಪ್ರತಿಮೆ ಯನ್ನು ಉದ್ಘಾಟಿಸಿದ್ದರು.
ಸುಮಾರು 400 ವರ್ಷಗಳ ಹಳೆಯದಾದ ನಂದಿ ವಿಗ್ರಹ ಇದ್ದಾಗಿದ್ದು 1659-73ರಲ್ಲಿ ನಿರ್ಮಾಣಗೊಂಡಿದೆ. ಚಾಮುಂಡಿ ಬೆಟ್ಟದ ಪ್ರಮುಖ ಕೇಂದ್ರ ಬಿಂದು ವಾಗಿರುವ ಈ ನಂದಿ ವಿಗ್ರಹ. ವಿಗ್ರಹದ ಕಾಲು, ಕುತ್ತಿಗೆ ಹಾಗೂ ಮುಖದ ಕೆಲವೆಡೆ ಬಿರುಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಡಳಿತಕ್ಕೆ ತಿಳಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


