ಉತ್ತರ ಕರ್ನಾಟಕ: ಪ್ರವಾಹ ಪೀಡಿತ ಶಾಲೆಗಳ ಪುನರ್ ನಿರ್ಮಾಣಕ್ಕೆ ನಬಾರ್ಡ್ ಧನಸಹಾಯ
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ತನ್ನ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮೂಲಕ ಉತ್ತರ ಕರ್ನಾಟಕದ 26 ಜಿಲ್ಲೆಗಳ 3,386 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪುನರ್ನಿರ್ಮಾಣಕ್ಕೆ ಧನಸಹಾಯ ನೀಡಲು ಒಪ್ಪಿದೆ.

ಬೆಂಗಳೂರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ತನ್ನ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮೂಲಕ ಉತ್ತರ ಕರ್ನಾಟಕದ 26 ಜಿಲ್ಲೆಗಳ 3,386 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪುನರ್ನಿರ್ಮಾಣಕ್ಕೆ ಧನಸಹಾಯ ನೀಡಲು ಒಪ್ಪಿದೆ.
ಕಳೆದ ವರ್ಷ ಪ್ರವಾಹದಿಂದ ಉಂಟಾದ ನಷ್ಟಕ್ಕಾಗಿ 758.073 ಕೋಟಿ ರೂ.ಗಳ ನಿಧಿಯನ್ನು ಬಿಡುಗಡೆ ಮಾಡಲಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮಂಗಳವಾರ ಆದೇಶ ಹೊರಡಿಸಿದ್ದು, ಶಾಲೆಗಳ ಸ್ಪಾಟ್ ಸಮೀಕ್ಷೆ ನಡೆಸುವಂತೆ ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರಿಗೆ ಸೂಚಿಸಿದೆ.
ಲೋಕೋಪಯೋಗಿ ಇಲಾಖೆಯೊಂದಿಗೆ ಅಂದಾಜು ಮಾಡಿ, ಆಡಳಿತಾತ್ಮಕ ಅನುಮೋದನೆ ಪಡೆದು, 15 ದಿನಗಳಲ್ಲಿ ವರದಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಲ್ಲಿಸುವಂತೆ ತಿಳಿಸಿದೆ. ಒಂದು ವೇಳೆ ಅವರು ಹಾಗೆ ಮಾಡಲು ವಿಫಲವಾದರೆ, ನಬಾರ್ಡ್ ಅನುಮೋದನೆಯನ್ನು ರದ್ದುಗೊಳಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


