ರಾಜ್ಯ

ಶಾಹೀನ್ ಶಾಲೆಯ ವಿದ್ಯಾರ್ಥಿಗಳ ವಿಚಾರಣೆ ಕಾನೂನುಬದ್ಧ; ಹೈಕೋರ್ಟ್‌ಗೆ ಸರ್ಕಾರ ಹೇಳಿಕೆ

ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಾಟಕ ಪ್ರದರ್ಶಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಬೀದರ್ ನಗರದ ಶಾಹಿನ್ ಶಾಲಾ ಮಕ್ಕಳ ವಿಚಾರಣೆ ನಡೆಸುವಾಗ ಪೊಲೀಸರಿಂದ ಯಾವುದೇ ಕಾನೂನು ಹಾಗೂ ನಿಯಮಗಳು ಉಲ್ಲಂಘನೆಯಾಗಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಹೇಳಿಕೆ ನೀಡಿದೆ.

ಶಾಹೀನ್ ಶಾಲೆಯ ವಿದ್ಯಾರ್ಥಿಗಳ ವಿಚಾರಣೆ ಕಾನೂನುಬದ್ಧ; ಹೈಕೋರ್ಟ್‌ಗೆ ಸರ್ಕಾರ ಹೇಳಿಕೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಾಟಕ ಪ್ರದರ್ಶಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಬೀದರ್ ನಗರದ ಶಾಹಿನ್ ಶಾಲಾ ಮಕ್ಕಳ ವಿಚಾರಣೆ ನಡೆಸುವಾಗ ಪೊಲೀಸರಿಂದ ಯಾವುದೇ ಕಾನೂನು ಹಾಗೂ ನಿಯಮಗಳು ಉಲ್ಲಂಘನೆಯಾಗಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಹೇಳಿಕೆ ನೀಡಿದೆ.

ಮಕ್ಕಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿದ್ದನ್ನು ಪ್ರಶ್ನಿಸಿ ವಕೀಲರಾದ ನಯನ ಜ್ಯೋತಿ ಝಾವರ್ ಹಾಗೂ ಮಾನವ ಹಕ್ಕುಗಳ ಸಂಘಟನೆ ‘ಸಿಕ್ರೆಮ್’ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದರು.

ವಿಚಾರಣೆ ವವೇಳೆ ಅಡ್ವಕೇಟ್‌ ಜನರಲ್ ಅವರು, ಶಾಲಾ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಶಿಕ್ಷಕರು, ವರ್ಗ ಶಿಕ್ಷಕರು, ಮಕ್ಕಳ ರಕ್ಷಣಾಧಿಕಾರಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ವಿಶೇಷ ಮಕ್ಕಳ ಪೊಲೀಸ್ ಘಟಕದ ಸದಸ್ಯರ ಸಮ್ಮುಖದಲ್ಲಿ ಮಕ್ಕಳ ಹೇಳಿಕೆಗಳನ್ನು ಪಡೆದುಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು. ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.