ಬಳ್ಳಾರಿ ವಿಭಜಿಸಿ, ಹರಪನಹಳ್ಳಿಯನ್ನು ಪ್ರತ್ಯೇಕ ಜಿಲ್ಲೆಯಾಗಿಸಿ: ಕರುಣಾಕರ ರೆಡ್ಡಿ
ಅಖಂಡ ಬಳ್ಳಾರಿ ಜಿಲ್ಲೆಯನ್ನು ಮೂರು ಭಾಗ ಮಾಡಿ ಹರಪನಹಳ್ಳಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿಗೆ ಶಾಸಕ ಕರುಣಾಕರ್ ರೆಡ್ಡಿ ನೇತೃತ್ವದ ನಿಯೋಗ ಮನವಿ ಮಾಡಿದೆ

ಬೆಂಗಳೂರು: ಅಖಂಡ ಬಳ್ಳಾರಿ ಜಿಲ್ಲೆಯನ್ನು ಮೂರು ಭಾಗ ಮಾಡಿ ಹರಪನಹಳ್ಳಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿಗೆ ಶಾಸಕ ಕರುಣಾಕರ್ ರೆಡ್ಡಿ ನೇತೃತ್ವದ ನಿಯೋಗ ಮನವಿ ಮಾಡಿದೆ.
ಆಮೂಲಕ ವಿಜಯನಗರ ಜಿಲ್ಲೆಯ ಪ್ರಸ್ತಾವನೆ ಮುಂದಿಟ್ಟಿರುವ ಆನಂದ್ ಸಿಂಗ್ ಹೋರಾಟಕ್ಕೆ ಹಿನ್ನಡೆಯನ್ನುಂಟು ಮಾಡಲು ರೆಡ್ಡಿ ಬ್ರದರ್ಸ್ ಮುಂದಾಗಿದ್ದಾರೆ.
ಹರಪನಹಳ್ಳಿಯನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂದು ಅದೇ ಕ್ಷೇತ್ರದ ಬಿಜೆಪಿ ಶಾಸಕ ಕರುಣಾಕರ್ ರೆಡ್ಡಿ ನೇತೃತ್ವದಲ್ಲಿ 30ಕ್ಕೂ ಅಧಿಕ ಮಂದಿಯ ನಿಯೋಗ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದೆ.
ಈಗಾಗಲೇ ಸಚಿವ ಆನಂದ್ ಸಿಂಗ್ ಅವರು ಬಳ್ಳಾರಿಯ ಜಿಲ್ಲೆಯ ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂದು ಬಲವಾಗಿ ಪಟ್ಟುಹಿಡಿದಿದ್ದಾರೆ. ಆದರೆ, ಆನಂದ್ ಸಿಂಗ್ ಅವರ ಬೇಡಿಗೆಗೆ ಬಳ್ಳಾರಿಯ ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಮುಖವಾಗಿ ಇದೇ ಕರಣಾಕರ್ ರೆಡ್ಡಿ ಬಳ್ಳಾರಿಯಿಂದ ವಿಜಯನಗರವನ್ನು ಪ್ರತ್ಯೇಕಗೊಳಿಸಿ ಜಿಲ್ಲೆ ಮಾಡುವುದಕ್ಕೆ ಬಲವಾಗಿ ವಿರೋಧಿಸಿದ್ದರು. ಇದೀಗ ಆನಂದ್ ಸಿಂಗ್ ಅವರಿಗೆ ಸೆಡ್ಡು ಹೊಡೆಯಲು ಕರುಣಾಕರ್ ರೆಡ್ಡಿ ಪ್ರತ್ಯೇಕ ಜಿಲ್ಲೆಯ ತಂತ್ರ ಹೆಣೆದಿದ್ದಾರೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


