ಹೆಚ್ ಡಿ ಕೋಟೆ : ಕೆರೆಯಲ್ಲಿ ಈಜಲು ಹೋದ 4 ಬಾಲಕರು ನೀರು ಪಾಲು
ಕೆರೆಗೆ ಈಜಲು ಹೋದ ನಾಲ್ವರು ಬಾಲಕರು ನೀರು ಪಾಲಾದ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆಯಲ್ಲಿ ನಡೆದಿದೆ.

ಮೈಸೂರು: ಕೆರೆಗೆ ಈಜಲು ಹೋದ ನಾಲ್ವರು ಬಾಲಕರು ನೀರು ಪಾಲಾದ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆಯಲ್ಲಿ ನಡೆದಿದೆ.
ಇಂದು ಶಿವರಾತ್ರಿ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದ ಕಾರಣ ನಾಲ್ವರು ಸ್ನೇಹಿತರು ಹೆಚ್. ಡಿ. ಕೋಟೆಯ ಮಲ್ಬಾರ್ ಕೆರೆಯಲ್ಲಿ ಈಜಲು ಹೋಗಿದ್ದರು. ಕೆರೆಯ ಆಳದ ನೀರಿಗೆ ನಾಲ್ವರು ಯುವಕರು ಇಳಿದಾಗ ನೀರಿನ ಪ್ರಭಾವಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ಬಾಲಕರನ್ನು ಕಿರಣ್, ಕೆಂಡ, ರೋಹಿತ್, ಯಶವಂತ ಎಂದು ಗುರುತಿಸಲಾಗಿದೆ.
ಕೆರೆ ಏರಿ ಮೇಲೆ ಬಾಲಕರ ಬಟ್ಟೆ ಹಾಗೂ ಸೈಕಲ್ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಗ್ರಾಮಸ್ಥರಿಂದ ಕೆರೆಯಲ್ಲಿ ಹುಡುಕಾಟ ನಡೆಸಲಾಗಿದ್ದು, ನಾಲ್ವರ ಮೃತದೇಹಗಳನ್ನೂ ಪತ್ತೆಮಾಡಲಾಗಿದೆ. ಘಟನೆ ಸಂಬಂಧ ಹೆಚ್.ಡಿ. ಕೋಟೆ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


