ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅವಹೇಳನಾಕಾರಿ ಹೇಳಿಕೆ : ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲು
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಾಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಾಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಈ ಕುರಿತಂತೆ ಫೆ 20 ರಂದು ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಭಜರಂಗದಳದ ಕಲ್ಲಡ್ಕ ವಲಯದ ಅಧ್ಯಕ್ಷ ಪುಷ್ಪರಾಜ್ ದೂರು ದಾಖಲಿಸಿದ್ದರು. ಉಲೈಬೆಟ್ಟು ಮಂಜಗುದ್ದೆ ನಿವಾಸಿ ಅಬ್ದುಲ್ ಸಲೀಮ್, ಪ್ರಭಾಕರ್ ಭಟ್ ಅವರ ಚಿತ್ರವನ್ನು ಕೆಟ್ಟದಾಗಿ ಬಿಂಬಿಸಿ ಸುಮಾರು 250 ಸದಸ್ಯರನ್ನು ಹೊಂದಿರುವ ವಾಟ್ಸ್‌ಆ್ಯಪ್ ಗ್ರೂಪ್ ನಲ್ಲಿ ಹಂಚಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. .
ಆರ್‌ಎಸ್‌ಎಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಿಂದೂ ನಾಯಕರ ವಿರುದ್ಧ ಸಲೀಂ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ ಎಂದು ಸಹ ದೂರಿನಲ್ಲಿ ತಿಳಿಸಲಾಗಿದೆ.
ಸಮಾಜದಲ್ಲಿ ಶಾಂತಿಕದಡುವ ಪ್ರಯತ್ನಿಸಿರುವ ಸಲೀಂ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪುಷ್ಪರಾಜ್ ಪೊಲೀಸರಿಗೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


