ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಗಲ್ಲಿಗೆ ಹಾಕಿ: ಜಮೀರ್ ಅಹ್ಮದ್
ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದವರಿಗೆ ಜೀವಾವಧಿ ಶಿಕ್ಷೆಯಾಗಲಿ. ಒಂದು ವೇಳೆ ಉದ್ದೇಶಪೂರ್ವಕವಾಗಿ ಇಂತಹ ಘೋಷಣೆಗಳನ್ನು ಕೂಗುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು.

ಬೆಂಗಳೂರು: ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದವರಿಗೆ ಜೀವಾವಧಿ ಶಿಕ್ಷೆಯಾಗಲಿ. ಒಂದು ವೇಳೆ ಉದ್ದೇಶಪೂರ್ವಕವಾಗಿ ಇಂತಹ ಘೋಷಣೆಗಳನ್ನು ಕೂಗುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ ಉದ್ಯಾನವನದಲ್ಲಿ ಸಂಸದ ಅಸದುದ್ದೀನ್ ಉವೈಸಿ, ನಿನ್ನೆ ಸಿಎಎ, ಎನ್‌ಆರ್‌ಸಿ ವಿರುದ್ಧ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಯುವತಿ ಅಮೂಲ್ಯ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದನ್ನು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದರು.
ಏನೋ ಒಂದು ಬಾರಿ ಹೇಳಿದ್ದರೆ ಬಾಯಿ ತಪ್ಪಿ ಹೇಳಿರಬಹುದು ಎಂದು ಭಾವಿಸಬಹುದಿತ್ತು. ಆದರೆ, ಒಂದೇ ಘೋಷಣೆಯನ್ನು ಮೂರು ಬಾರಿ ಹೇಳಿದ್ದಾರೆ. ವೇದಿಕೆ ಮೇಲೆ ಇದ್ದವರು ಘೋಷಣೆ ಕೂಗದಂತೆ ಆಕೆಯನ್ನು ತಡೆಯಲು ಪ್ರಯತ್ನಿಸಿದರೂ ಆಕೆ ಸುಮ್ಮನಾಗಲಿಲ್ಲ. ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.
ಆಕೆಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಜೀವಾವಧಿ ಶಿಕ್ಷೆ ಆಗಬೇಕು. ಇದು ದೇಶದ್ರೋಹ. ಅಮೂಲ್ಯ ಹೇಳಿಕೆಯನ್ನು ಖಂಡಿಸುತ್ತೇನೆ. ನಾನು 2, 3 ಕಡೆ ಸಿಎಎ ವಿರೋಧಿ ಸಭೆ ಆಯೋಜಿಸಿದ್ದಾಗ ಅಮೂಲ್ಯ ಸ್ವಯಂ ಪ್ರೇರಿತರಾಗಿ ಪಾಲ್ಗೊಂಡಿದ್ದಳು. ಆಕೆಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ಯಾರೇ ಪಾಕ್ ಪರ ಘೋಷಣೆ ಕೂಗಿದರೂ ನಾವು ಸಹಿಸಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


