ರಾಜ್ಯ

ವಿಜಯಪುರ: ಬೆಂಕಿಪೊಟ್ಟಣ ಸಾಗುತ್ತಿದ್ದ ಲಾರಿ ಸುಟ್ಟು ಭಸ್ಮ, ಆಶ್ಚರ್ಯಕರ ರೀತಿಯಲ್ಲಿ ಡೈವರ್-ಕ್ಲೀನರ್ ಬಚಾವ್!

ಬೆಂಕಿ ಪೊಟ್ಟಣ ತುಂಬಿಕೊಂಡು ಚಲಿಸುತ್ತಿದ್ದ ಲಾರಿಯೊಂದು ಸುಟ್ಟು ಕರಕಲಾಗಿರುವ ಘಟನೆ ಶನಿವಾರ ಇಲ್ಲಿ ನಡೆದಿದೆ.

ವಿಜಯಪುರ: ಬೆಂಕಿಪೊಟ್ಟಣ ಸಾಗುತ್ತಿದ್ದ ಲಾರಿ ಸುಟ್ಟು ಭಸ್ಮ, ಆಶ್ಚರ್ಯಕರ ರೀತಿಯಲ್ಲಿ ಡೈವರ್-ಕ್ಲೀನರ್ ಬಚಾವ್!
ಲಾರಿ ಬೆಂಕಿಗಾಹುತಿ
Published On :

ವಿಜಯಪುರ: ಬೆಂಕಿ ಪೊಟ್ಟಣ ತುಂಬಿಕೊಂಡು ಚಲಿಸುತ್ತಿದ್ದ ಲಾರಿಯೊಂದು ಸುಟ್ಟು ಕರಕಲಾಗಿರುವ ಘಟನೆ ಶನಿವಾರ ಇಲ್ಲಿ ನಡೆದಿದೆ.

ತಮಿಳುನಾಡಿನಿಂದ ಬೆಂಕಿ ಪೊಟ್ಟಣಗಳನ್ನು ತುಂಬಿಕೊಂಡು ಲಾರಿ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳುತ್ತಿದ್ದಾಗ ದಿಢೀರ್ ಬೆಂಕಿ ಹತ್ತಿಕೊಂಡು ಭಸ್ಮವಾಗಿದೆ. ಆದರೆ, ರಾಷ್ಟ್ರೀಯ ಹೆದ್ದಾರಿ 13 ರ ಅನಿಕೇರಿ ತಾಂಡಾ ಬಳಿ ನಡೆದ ಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಆಶ್ಚರ್ಯಕರವಾಗಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗ್ನಿ ಶಾಮಕ ಪಡೆಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ. ಘಟನೆ ಹಿನ್ನಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ತೀವ್ರ ಅಸ್ತವ್ಯಸ್ತಗೊಂಡಿದೆ. ವಿಜಯಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.