ರಾಜ್ಯ

ಜೂಜು ಕೇಂದ್ರ ಕ್ಯಾಸಿನೋ ತೆರೆದರೆ ರಾಜ್ಯದ ಜನತೆಗೇನು ಲಾಭ: ಡಿ.ಕೆ. ಶಿವಕುಮಾರ್

ಅಮೆರಿಕ ಹಾಗೂ ಶ್ರೀಲಂಕಾ ಮಾದರಿಯಲ್ಲಿ ರಾಜ್ಯದಲ್ಲೂ ಕ್ಯಾಸಿನೋ (ಜೂಜು ಕೇಂದ್ರ) ತೆರೆದರೆ ರಾಜ್ಯದ ಜನರಿಗೆ ಏನು ಲಾಭ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಜೂಜು ಕೇಂದ್ರ ಕ್ಯಾಸಿನೋ ತೆರೆದರೆ ರಾಜ್ಯದ ಜನತೆಗೇನು ಲಾಭ: ಡಿ.ಕೆ. ಶಿವಕುಮಾರ್
ಡಿಕೆ ಶಿವಕುಮಾರ್
Published On :

ಬೆಂಗಳೂರು: ಅಮೆರಿಕ ಹಾಗೂ ಶ್ರೀಲಂಕಾ ಮಾದರಿಯಲ್ಲಿ ರಾಜ್ಯದಲ್ಲೂ ಕ್ಯಾಸಿನೋ (ಜೂಜು ಕೇಂದ್ರ) ತೆರೆದರೆ ರಾಜ್ಯದ ಜನರಿಗೆ ಏನು ಲಾಭ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೆರಿಕ  ಹಾಗೂ ಶ್ರೀಲಂಕಾ ಮಾದರಿಯಲ್ಲಿ ರಾಜ್ಯದಲ್ಲೂ ಕ್ಯಾಸಿನೋ (ಜೂಜು ಕೇಂದ್ರ) ತೆರೆಯಲು   ಪ್ರವಾಸೋದ್ಯಮ ಇಲಾಖೆ ನಡೆಸುತ್ತಿರುವ ಪ್ರಯತ್ನ ಆಘಾತಕಾರಿಯಾಗಿದ್ದು,ಸರ್ಕಾರದ ಉದ್ದೇಶವನ್ನು ಜನರಿಗೆ ಮನವರಿಕೆ ಮಾಡಿಕೊಡಲಿ. ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್‌ನಲ್ಲಿ ಕ್ಯಾಸಿನೋ ಜಾರಿ ಬಗ್ಗೆ ಪ್ರಕಟಿಸಲಿ ಎಂದರು.

ಕ್ಯಾಸಿನೋಯಿಂದ ಜನರಿಗೆ ಆಗುವ ಲಾಭಗಳೇನು ಎಂಬ ಬಗ್ಗೆ ಬಜೆಟ್ ಅಧಿವೇಶನದಲ್ಲಿ  ವಿವರಿಸಲಿ  ಎಂದು ಡಿಕೆ ಶಿವಕುಮಾರ್ ಸವಾಲು ಹಾಕಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.