ಕರ್ನಾಟಕ ಪೋಲೀಸ್ ಮಹತ್ವದ ಕಾರ್ಯಾಚರಣೆ, ದ, ಆಫ್ರಿಕಾದಲ್ಲಿ ಭೂಗತ ಪಾತಕಿ ರವಿ ಪೂಜಾರಿ ಬಂಧನ
ಭೂಗತಪಾತಕಿ ರವಿ ಪೂಜಾರಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಬಂಧಿಸಲಾಗಿದ್ದು, ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಭಾರತಕ್ಕೆ ಕರೆತರುತ್ತಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೂಗತಪಾತಕಿ ರವಿ ಪೂಜಾರಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಬಂಧಿಸಲಾಗಿದ್ದು, ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಭಾರತಕ್ಕೆ ಕರೆತರುತ್ತಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸುಲಿಗೆ, ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿರುವ 15 ವರ್ಷಗಳಿಂದ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಸೆನೆಗಲ್‌ಗೆ ಗಡೀಪಾರು ಮಾಡಲಾಗಿದೆ.
ನಾವು ರವಿ ಪೂಜಾರಿಯನ್ನು ಸೆನೆಗಲ್ ನಿಂದ ಕರೆತರುತ್ತಿದ್ದೇವೆ. ಸಧ್ಯ ನಾವು ಪ್ಯಾರೀಸಿನಲ್ಲಿದ್ದೇವೆ. ಏರ್ ಫ್ರಾನ್ಸ್ ವಿಮಾನದ ಮೂಲಕ ನಾವು ಪಯಣಿಸುತ್ತಿದ್ದು ಮಧ್ಯರಾತ್ರಿಯ ವೇಳೆಗೆ ಭಾರತವನ್ನು ತಲುಪುತ್ತೇವೆ ಎಂದು ರವಿ ಪೂಜಾರಿ ಬಂಧನ ತಂಡದ ಬಾಗವಾಗಿರುವ ಪೊಲೀಸ್ ಅಧಿಕಾರಿ ಓರ್ವರು ಪಿಟಿಐಗೆ ಹೇಳಿದ್ದಾರೆ.
ಭೂಗತ ಪಾತಕಿ ರವಿ ಪೂಜಾರಿ ಕಳೆದ ವರ್ಷ ಸೆನೆಗಲ್‌ನಲ್ಲಿ ಬಂಧನಕ್ಕೊಳಗಾಗಿ ಜಾಮೀನು ಪಡೆದಿದ್ದ. ಪ್ರಾರಂಭದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಜತೆ ಸಂಬಂಧ ಹೊಂದಿದ್ದ ಪೂಜಾರಿ ಬಳಿಕ ದಾವೂದ್ ಇಬ್ರಾಹಿಂ ಜತೆಗೆ ಸಹ ಕೆಲಸ ಮಾಡಿದ್ದನೆಂದು ಪೋಲೀಸರು ಹೇಳಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ, ಕೇಂದ್ರೀಯ ತನಿಖಾ ದಳ ಮತ್ತು ರಿಸರ್ಚ್ ಆಂಡ್ ಅನಾಲಿಟಿಕ್ಸ್ ವಿಂಗ್ ಪೂಜಾರಿಯನ್ನು ತನಿಖೆಗೆ ಒಳಪಡಿಸಲಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


