ಯಾರೂ ಇಲ್ಲದ ವೇಳೆಯಲ್ಲಿ ವಿದ್ಯಾರ್ಥಿನಿ ಮನೆಗೆ ನುಗ್ಗಿದ ಬಿಇಒ : ಸ್ಥಳೀಯರಿಂದ ಹಲ್ಲೆ
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಿಇಒ (ಕ್ಷೇತ್ರ ಶಿಕ್ಷಣಾಧಿಕಾರಿ) ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಆರೋಪದಲ್ಲಿ ಅವರ ಮೇಲೆ ಪೋಷಕರು ಹಾಗೂ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿಯಲ್ಲಿ ನಡೆದಿದೆ.

ಗದಗ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಿಇಒ(ಕ್ಷೇತ್ರ ಶಿಕ್ಷಣಾಧಿಕಾರಿ) ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಆರೋಪದಲ್ಲಿ ಅವರ ಮೇಲೆ ಪೋಷಕರು ಹಾಗೂ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿಯಲ್ಲಿ ನಡೆದಿದೆ.
ಮುಂಡರಗಿಯ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ) ಎಸ್.ಎನ್.ಹಳ್ಳಿಗುಡಿ ಹಲ್ಲೆಗೊಳಗಾದ ಅಧಿಕಾರಿ. ಯಾರೂ ಇಲ್ಲದ ಸಮಯದಲ್ಲಿ ವಿದ್ಯಾರ್ಥಿನಿ ಮನೆಗೆ ನುಗ್ಗಿದ್ದಾರೆ ಎಂದು ಆರೋಪಿಸಿ ಆಕೆಯ ಪೋಷಕರು ಹಾಗೂ ಸ್ಥಳೀಯರು ಆಕ್ರೋಶಗೊಂಡಿದ್ದಾರೆ.
ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ಪೋಷಕರು ದೂರು ದಾಖಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಇಒ ಕೂಡ ಪ್ರತಿ ದೂರು ದಾಖಲಿಸಿದ್ದಾರೆ.
ವಿದ್ಯಾರ್ಥಿನಿ ಮನೆಗೆ ನಾನು ಪರೀಕ್ಷೆ ಬಗ್ಗೆ ಟಿಪ್ಸ್ ನೀಡಲು ಹೋಗಿದ್ದೆ, ಅದನ್ನು ನೀಡಿ ವಾಪಸ್ ಬಂದಿದ್ದೆ, ಅದಾದ ನಂತರ ನನ್ನ ಮನೆ ಹತ್ತಿರ ಬಂದು ಐದಾರು ಮಂದಿ ದುಷ್ಕರ್ಮಿಗಳು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ,
ಗಾಯಗೊಂಡ ಬಿಇಒ 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿಡಲಾಗಿತ್ತು. ಪ್ರಕರಣ ಸಂಬಂಧ ಮುಂಡರಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್,ಬಿಇಒ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಕಮಿಷನರ್ ಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


