ಹುಡುಗಿ ಚುಡಾಯಿಸಿದ್ದ ಆರೋಪ: ಹಾಸ್ಟೆಲ್ ನುಗ್ಗಿ ದಾಂದಲೆ ನಡೆಸಿದ ಯುವಕರ ಗುಂಪು
ಯುವತಿಯೊಬ್ಬಳನ್ನು ಚುಡಾಸಿದ ಕಾರಣಕ್ಕೆ ಯುವಕರ ಗುಂಪೊಂದು ಹಾಸ್ಟೆಲ್'ಗೆ ನುಗ್ಗಿ ದಾಂದಲೆ ನಡೆಸಿ ವಸತಿ ನಿಲಯದ ಕಿಟಕಿ ಗಾಜುಗಳನ್ನೆಲ್ಲಾ ಪುಡಿ ಪುಡಿ ಮಾಡಿರುವ ಘಟನೆ ಸಂಗಮೇಶ್ವರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನಡೆದಿದೆ.

ಬೆಳಗಾವಿ: ಯುವತಿಯೊಬ್ಬಳನ್ನು ಚುಡಾಸಿದ ಕಾರಣಕ್ಕೆ ಯುವಕರ ಗುಂಪೊಂದು ಹಾಸ್ಟೆಲ್'ಗೆ ನುಗ್ಗಿ ದಾಂದಲೆ ನಡೆಸಿ ವಸತಿ ನಿಲಯದ ಕಿಟಕಿ ಗಾಜುಗಳನ್ನೆಲ್ಲಾ ಪುಡಿ ಪುಡಿ ಮಾಡಿರುವ ಘಟನೆ ಸಂಗಮೇಶ್ವರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, 8-10 ಯುವಕರ ತಂಡ ಹಾಸ್ಟೆಲ್ ನಲ್ಲಿ ದಾಂಧಲೆ ನಡೆಸಿರುವುದು ಕಂಡು ಬಂದಿದೆ.
ಹಾಸ್ಟೆಲ್'ಗೆ ನುಗ್ಗಿರುವ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ತನಿಖೆ ವೇಳೆ ವಿದ್ಯಾರ್ಥಿಗಳು ದಾಳಿಯ ಹಿಂದಿನ ಕಾರಣ ತಿಳಿದಿಲ್ಲ ಎಂದು ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ.
ಆದರೆ, ಮೂಲಗಳ ಪ್ರಕಾರ ಹಾಸ್ಟೆಲ್'ನ ಕೆಲ ವಿದ್ಯಾರ್ಥಿಗಲು ಯುವತಿಯೊಬ್ಬಳನ್ನು ಚುಡಾಯಿಸಿದ್ದು, ಇದರಿಂದ ಕೆಂಡಾಮಂಡಲಗೊಂಡಿರುವ ಸ್ಥಳೀಯ ಯುವಕರು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆದರೂ ಇದಾವುದಕ್ಕೂ ಕಿವಿಗೊಡದ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತೆ ಮತ್ತ ಚಾಳಿಯನ್ನು ಮುಂದುವರೆಸಿದ್ದಾರೆ. ಇದರಿಂದ ಆಕ್ರೋಶಗೊಂಡು ಯುವಕರ ಗುಂಪು ಹಾಸ್ಟೆಲ್ ಮೇಲೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


