ಕೋಲಾರದಲ್ಲಿ ಎನ್ಐಎ ದಾಳಿ, ಬಂಧಿತ ಸಲೀಂ ಖಾನ್, ಪಾಷಾ ಮನೆಯಲ್ಲಿ ಶೋಧ
ಶಂಕಿತ ಉಗ್ರ ಮೆಹಬೂಬ್ ಪಾಷಾನೊಂದಿಗೆ ನಂಟು ಹೊಂದಿದೆ ಆರೋಪದ ಮೇಲೆ ಇತ್ತೀಚಿಗೆ ತಮಿಳುನಾಡಿನಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಬಂಧನಕ್ಕೊಳಗಾಗಿದ್ದ ಸಲೀಂ ಖಾನ್ ಹಾಗೂ ಪಾಷಾ ಮನೆ ಮೇಲೆ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದು, ಆರೋಪಿಗಳ ಕುಟುಂಬಸ್ಥರಿಗೆ ಹೇಳಿಕೆ ಪಡೆದಿದ್ದಾರೆ.

ನವದೆಹಲಿ: ಶಂಕಿತ ಉಗ್ರ ಮೆಹಬೂಬ್ ಪಾಷಾನೊಂದಿಗೆ ನಂಟು ಹೊಂದಿದೆ ಆರೋಪದ ಮೇಲೆ ಇತ್ತೀಚಿಗೆ ತಮಿಳುನಾಡಿನಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಬಂಧನಕ್ಕೊಳಗಾಗಿದ್ದ ಸಲೀಂ ಖಾನ್ ಹಾಗೂ ಪಾಷಾ ಮನೆ ಮೇಲೆ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದು, ಆರೋಪಿಗಳ ಕುಟುಂಬಸ್ಥರಿಗೆ ಹೇಳಿಕೆ ಪಡೆದಿದ್ದಾರೆ.
ಇಂದು ಬೆಳಗಿನ ಜಾವ ಕೋಲಾರದಲ್ಲಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು, ರೆಹಮತ್ ನಗರದಲ್ಲಿರುವ ಸಲೀಂ ಖಾನ್ ಮನೆಯಲ್ಲಿ ಹಾಗೂ ಪಿಎಸ್ ಕಾಲೋನಿಯಲ್ಲಿರುವ ಪಾಷಾ ಮನೆಯಲ್ಲಿ ತೀವ್ರ ಶೋಧ ನಡೆಸಿದರು. ಬಳಿಕ ಕುಟಂಬಸ್ಥರಿಂದ ಹೇಳಿಕೆ ಪಡೆದಿದ್ದಾರೆ ಎನ್ನಲಾಗಿದೆ.
ಉಗ್ರಗಾಮಿ ಸಂಘಟನೆ ಜೊತೆ ಸಂಪರ್ಕ, ಹಣಕಾಸು ನೆರವು, ವಿಧ್ವಂಸಕ ಕೃತ್ಯಗಳಿಗೆ ಪಿತೂರಿ ಈ ಪ್ರಕರಣಗಳ ಸಂಬಂಧ ದಾಳಿ ಮತ್ತು ಶೋಧ ಕಾರ್ಯ ನಡೆಸಲಾಗಿದೆ ಎಂದು ಸಂಸ್ಥೆಯ ಉನ್ನತಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕಳೆದ ತಿಂಗಳು ಕೂಡ ಚೆನ್ನೈ, ಕೊಯಂಮತ್ತೂರು ಸೇರಿದಂತೆ ಹಲವೆಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಕೆಲವರನ್ನು ವಶಕ್ಕೆ ಪಡೆದು ಉಗ್ರಗಾಮಿ ಚಟುವಟಿಕೆ ಸಂಚನ್ನು ವಿಫಲಗೊಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


