ರಾಜ್ಯ

ಪ್ರಯಾಣಿಕರಿಗೆ ಶಾಕ್! ಬಸ್ ಪ್ರಯಾಣ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಜಾರಿ

ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣದರ ಏರಿಕೆ ಮಾಡಿ ಸರ್ಕಾರ ಆದೇಶ ಪ್ರಕಟಿಸಿದೆ. ಸರ್ಕಾರಿ ಸಾರಿಗೆ ಬಸ್ ದರದಲ್ಲಿ ಶೇ.12ರಷ್ಟು ಹೆಚ್ಚಳ ಮಾಡಿ ಆದೇಶ ಜಾರಿ ಮಾಡಲಾಗಿದ್ದು ದರ ಹೆಚ್ಚಳ ಇಂದು ಮಧ್ಯರಾತ್ರಿಯಿಂದಲೇ ಅನ್ವಯಿಸಲಿದೆ.

ಪ್ರಯಾಣಿಕರಿಗೆ ಶಾಕ್! ಬಸ್ ಪ್ರಯಾಣ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಜಾರಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣದರ ಏರಿಕೆ ಮಾಡಿ ಸರ್ಕಾರ ಆದೇಶ ಪ್ರಕಟಿಸಿದೆ. ಸರ್ಕಾರಿ ಸಾರಿಗೆ ಬಸ್ ದರದಲ್ಲಿ ಶೇ.12ರಷ್ಟು ಹೆಚ್ಚಳ ಮಾಡಿ ಆದೇಶ ಜಾರಿ ಮಾಡಲಾಗಿದ್ದು ದರ ಹೆಚ್ಚಳ ಇಂದು ಮಧ್ಯರಾತ್ರಿಯಿಂದಲೇ ಅನ್ವಯಿಸಲಿದೆ.

ದರ ಹೆಚ್ಚಳ ಸಂಬಂಧ ಸಲ್ಲಿಕೆಯಾಗಿದ್ದ ಪ್ರಸ್ತಾವನೆ ಪರಿಶೀಲಿಸಿ  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು  ಶೇ. 12ರಷ್ಟು ಬಸ್ ಪ್ರಯಾಣ ದರ ಏರಿಕೆ ಮಾಡಲು ಸರ್ಕಾರ ಅನುಮೋದಿಸಿದೆ.

ಬಸ್ ದರ ಏರಿಕೆ ಸಂಬಂಧ ಸಾರಿಗೆ ಇಲಾಖೆಯ ಆಧೀನ ಕಾರ್ಯದರ್ಶಿ ಸತ್ಯವತಿ ಆದೇಶ ಹೊರಡಿಸಿದ್ದಾರೆ.

Story image

ಎಲ್ಲೆಲ್ಲಿ ಎಷ್ಟು ದರ ಏರಿಕೆ?

ಸರ್ಕಾರ ಬಸ್ ಪ್ರಯಾಣದರವನ್ನು ಶೇ.12ರಷ್ಟು ಹೆಚ್ಚಳ ಮಾಡಿದೆ. ಈ ಪ್ರಕಾರ 100 ರು. ಟಿಕೆಟಿನ ಬೆಲೆ 12 ರು. ಏರಿಕೆಯಾಗಿ 112 ರು. ಆಗಲಿದೆ. ಅದರಂತೆ ೨೦೦ ರು. ಗೆ ೨೨೪, 300 ರು. ಗೆ 336 , 500  ರು. ಗೆ 560 1000  ರು. ಗೆ 1120 ರು. ನೀಡಬೇಕಾಗುವುದು.

ಈ ದರ ಏರಿಕೆಯು ರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಅನ್ವಯಿಸಲಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದರ ಏರಿಕೆಯಿಂದ ಹೊರಗುಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.