ಅವೈಜ್ಞಾನಿಕ ವಿದ್ಯುತ್ ಪ್ರಸರಣ ಕೇಂದ್ರ ನಿರ್ಮಾಣ, ಹೆದ್ದಾರಿ ತಡೆದು ರೈತರ ಪ್ರತಿಭಟನೆ
ಅವೈಜ್ಞಾನಿಕವಾಗಿ ವಿದ್ಯುತ್ ಪ್ರಸರಣ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ದಿಢೀರ್ ಪ್ರತಿಭಟಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು-ಸೋಮಹಳ್ಳಿಯಲ್ಲಿ ನಡೆದಿದೆ.

ಚಾಮರಾಜನಗರ: ಅವೈಜ್ಞಾನಿಕವಾಗಿ ವಿದ್ಯುತ್ ಪ್ರಸರಣ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ದಿಢೀರ್ ಪ್ರತಿಭಟಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು-ಸೋಮಹಳ್ಳಿಯಲ್ಲಿ ನಡೆದಿದೆ.
ಬೇಗೂರು ಸಮೀಪ ಸ್ಥಾಪಿಸಲು ಹೊರಟಿರುವ ವಿದ್ಯುತ್ ಪ್ರಸರಣ ಕೇಂದ್ರ ಅವೈಜ್ಞಾನಿಕವಾಗಿ ಕೂಡಿದೆ. ಕಮರಹಳ್ಳಿ ಕೆರೆ ತುಂಬಿದ ವೇಳೆ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ನುಗ್ಗಲಿದೆ. ಜೊತೆಗೆ ಬೇರೆ ಕೆರೆಗಳಿಗೂ ನೀರು ಬಿಡಲು ಅಡ್ಡಿಯಾಗುತ್ತದೆ ಎಂದು ಆರೋಪಿಸಿ ರೈತರು ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು. ಸ್ದಳಕ್ಕೆ ಆಗಮಿಸಿದ ಅಂದಿನ ರಾಜ್ವಸ್ವ ನಿರೀಕ್ಷಕ ಮಹದೇವಪ್ಪ ಮಾತಾನಾಡಿ, 141ಸರ್ವೆ ನಂಬರ್‌ನಲ್ಲಿ ವಿದ್ಯುತ್ ಪ್ರಸರಣ ಕೇಂದ್ರ ಸ್ದಾಪನೆ ಮಾಡಲು ತಿಳಿಸಲಾಗಿತ್ತು.
ಆದರೆ, ಚೆಸ್ಕಾಂ ಅಧಿಕಾರಿಗಳು ಸರ್ವೆ ನಂಬರ್ 137ರಲ್ಲಿ ಸ್ದಾಪನೆ ಮಾಡಲು ಹೊರಟಿರುವುದಾಗಿ ಆರೋಪಿಸಿದರು. ಇದಕ್ಕೆ ಚೆಸ್ಕಾಂನ ಎಂಜಿನಿಯರ್ ಸಂತೋಷ್ ಪ್ರತಿಕ್ರಿಯಿಸಿ, ಮಾ. 4ರೊಳಗೆ ತಾಪಂ ಸಭಾಂಗಣದಲ್ಲಿ ಕಂದಾಯ, ಸಣ್ಣ ನೀರಾವರಿ, ವಿದ್ಯುತ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಸಭೆ ನಡೆಸುವ ತನಕ ಕಾಮಗಾರಿ ನಿಲ್ಲಿಸಲಾಗುವುದು ಎಂದು ಆಶ್ವಾಸನೆ ನೀಡಿದ ಬಳಿಕ ರೈತರು ಧರಣಿ ಕೈ ಬಿಟ್ಟರು.
ವರದಿ ಗುಳಿಪುರ ನಂದೀಶ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


