ರಾಜ್ಯ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಯತ್ನ: ಕಾಮುಕನಿಗೆ ಸಾರ್ವಜನಿಕರಿಂದ ಥಳಿತ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದ ಕಾಮುಕನನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಯತ್ನ: ಕಾಮುಕನಿಗೆ ಸಾರ್ವಜನಿಕರಿಂದ ಥಳಿತ
ಸಾಂದರ್ಭಿಕ ಚಿತ್ರ
Published On :

ಕಲಬುರಗಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದ ಕಾಮುಕನನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಗೋವಾ ಹೋಟೆಲ್​ ಬಳಿ ಪ್ರವೀಣ್ (30 ವರ್ಷ) ಎಂಬಾತನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಮುಕ ಪ್ರವೀಣ್ ಮೂಲತಃ ಚಿಂಚೋಳಿ ತಾಲೂಕಿನ ಮಿರಿಯಾಣಾ ಗ್ರಾಮದವನು ಎನ್ನಲಾಗಿದೆ.

ಗೋವಾ ಹೋಟೆಲ್​ ಬಳಿ 4 ವರ್ಷದ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಲು ಯತ್ನಿಸಿದ್ದ ವೇಳೆ ಸಾರ್ವಜನಿಕರು ಧಾವಿಸಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪ್ರವೀಣ್ ನನ್ನು ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.