ರಾಜ್ಯ

ಚಿತ್ರದುರ್ಗ: 10 ತಿಂಗಳ ಮಗು ಕೊಂದು, ತಾಯಿ ನೇಣಿಗೆ ಶರಣು

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬಳು ತನ್ನ 10 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಐನಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ: 10 ತಿಂಗಳ ಮಗು ಕೊಂದು, ತಾಯಿ ನೇಣಿಗೆ ಶರಣು
ಸಂಗ್ರಹ ಚಿತ್ರ
Published On :

ಚಿತ್ರದುರ್ಗ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬಳು ತನ್ನ 10 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ  ವಿದ್ರಾವಕ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಐನಳ್ಳಿ ಗ್ರಾಮದಲ್ಲಿ  ನಡೆದಿದೆ. 

ಐನಳ್ಳಿ ಗ್ರಾಮದ ಆಶಾಬಾಯಿ (24) ಮೃತ ಮಹಿಳೆ. ಹೆರಿಗೆಯ  ನಂತರ ಅನಾರೋಗ್ಯ ಕಾಡುತ್ತಿದ್ದ ಹಿನ್ನೆಲೆಯಲ್ಲಿ ಮೃತರು ಮಾನಸಿಕ ಖಿನ್ನತೆಗೆ  ಒಳಗಾಗಿದ್ದರು.  ಮಗುವನ್ನು ನೀರಿನ ಟಬ್​ನಲ್ಲಿ ಮುಳುಗಿಸಿ ಕೊಂದ ಬಳಿಕ, ಅವರು  ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೆರಿಗೆ  ನಂತರ  ಅನಾರೋಗ್ಯದಿಂದ ಬಳಲುತ್ತಿದ್ದೆ. ಹೀಗಾಗಿ ತಾನು ಆತ್ಮಹತ್ಯೆ ಮಾಡಿಕೊಂಡರೆ ಮಗು  ಅನಾಥವಾಗುತ್ತದೆ ಎಂದು ಭಾವಿಸಿ, ಮಗುವನ್ನು ಕೊಂದಿರುವುದಾಗಿ ಅವರು ಸಾಯುವ ಮುನ್ನ  ಡೆತ್  ನೋಟ್ ನಲ್ಲಿ ಬರೆದಿಟ್ಟಿದ್ದಾರೆ.

ಆಶಾಬಾಯಿ ಲಂಬಾಣಿಹಟ್ಟಿಯ ಹೇಮಂತ್​ ಜತೆ ಎರಡು ವರ್ಷದ ಹಿಂದೆ  ವಿವಾಹ ಆಗಿದ್ದರು ಎನ್ನಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಚಿಕ್ಕಜಾಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.