ರಾಜ್ಯ

'ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ದೆಹಲಿ ಪೊಲೀಸರ ಹಿಂದೇಟಿಗೆ ಕಾರಣ'

ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ತಡೆಯಲು ಪೊಲೀಸರು ಹಿಂದೇಟು ಹಾಕಲು ಮಂಗಳೂರು ಗೋಲಿಬಾರ್‌ ವಿಚಾರವಾಗಿ ವಿಪಕ್ಷಗಳು ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ.

'ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ದೆಹಲಿ ಪೊಲೀಸರ ಹಿಂದೇಟಿಗೆ ಕಾರಣ'
ದೆಹಲಿ ಹಿಂಸಾಚಾರ
Published On :

ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ತಡೆಯಲು ಪೊಲೀಸರು ಹಿಂದೇಟು ಹಾಕಲು ಮಂಗಳೂರು ಗೋಲಿಬಾರ್‌ ವಿಚಾರವಾಗಿ ವಿಪಕ್ಷಗಳು ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ.

ಹಿಂಸಾಚಾರ ಪೂರ್ವ ನಿಯೋಜಿತವಾಗಿದ್ದು, ಇದರ ವಿರುದ್ಧ ಕಠಿಣ ಕ್ರಮದ ಅಗತ್ಯವಿದೆ. ಇದೇ ಪರಿಸ್ಥಿತಿಯನ್ನು ಡಿಸೆಂಬರ್ 19, 2019ರಂದು ಮಂಗಳೂರು ಅನುಭವಿಸಿತ್ತು ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದಂತಹ ಸಂದರ್ಭದಲ್ಲಿ ಮಂಗಳೂರು ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಗೋಲಿಬಾರ್ ನಡೆಸುವ ಪರಿಸ್ಥಿತಿ ಉದ್ಭವಿಸಬೇಕಾಯಿತು. ಆದರೆ ಗೋಲಿಬಾರ್ ಪ್ರಕರಣಕ್ಕೆ ಪೊಲೀಸರನ್ನೇ ವಿಪಕ್ಷಗಳು ಆರೋಪಿಯನ್ನಾಗಿಸಿವೆ‌.

ಗೋಲಿಬಾರ್ ಈಗ ಪಿ.ಐ.ಎಲ್ ಸೇರಿದಂತೆ ನ್ಯಾಯಿಕ ಪ್ರಕ್ರಿಯೆಗಳಲ್ಲಿ ಮುಳುಗಿದೆ. ಇದರಿಂದ ಬೇಸತ್ತು ವಿಪಕ್ಷಗಳ ಟೀಕೆಯಿಂದಾಗಿ ದೆಹಲಿ ಪೊಲೀಸರು ಪ್ರಾಯಶಃ ಕಠಿಣ ಕ್ರಮ ತೆಗೆದುಕೊಳ್ಳುವಲ್ಲಿ ಹಿಂದೇಟಿಗೆ ಇದೇ ಕಾರಣವಾಗಿರಬಹುದು ಎಂದು ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.