ದೇಶದ್ರೋಹ ಪ್ರಕರಣ: ವಿಚಾರಣೆ ವೇಳೆ ಬಾಯ್ಬಿಡದ ಅಮೂಲ್ಯ, ಮಾಹಿತಿ ಕಲೆಹಾಕಲು ಪೊಲೀಸರ ಹರಸಾಹಸ
ಪಾಕಿಸ್ತಾನ ಪರ ಘೋಷಣೆ ಕೂಗಿ ರಾಷ್ಟ್ರದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಅಮೂಲ್ಯ ವಿಚಾರಣೆ ವೇಳೆ ಮೌನ ತಾಳಿದ್ದು, ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲು ವಿಶೇಷ ತನಿಖಾ ದಳದ ಅಧಿಕಾರಿಗಳು ಹರಸಾಹಸ ಪಡುವಂತಾಗಿದೆ.

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿ ರಾಷ್ಟ್ರದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಅಮೂಲ್ಯ ವಿಚಾರಣೆ ವೇಳೆ ಮೌನ ತಾಳಿದ್ದು, ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲು ವಿಶೇಷ ತನಿಖಾ ದಳದ ಅಧಿಕಾರಿಗಳು ಹರಸಾಹಸ ಪಡುವಂತಾಗಿದೆ.
ಅಮೂಲ್ಯಾ ಲಿಯೋನಾರನ್ನು ನ್ಯಾಯಾಲಯ 5 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ವಿಚಾರಣೆ ವೇಳೆ ಅಮೂಲ್ಯ ಬಾಯ್ಬಿಡದೆ ಮೌನ ತಾಳಿರುವುದು ಪೊಲೀಸರಿಗೆ ಸಂಕಷ್ಟವನ್ನು ಎದುರು ಮಾಡಿದೆ. ಈ ನಡುವೆ ಭದ್ರತಾ ಹಿತದೃಷ್ಟಿಯಿಂದಾಗಿ ಪೊಲೀಸರು ಯಾವುದೇ ಮಾಹಿತಿಯನ್ನೂ ಬಹಿರಂಗಪಡಿಸುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಇನ್ನು ಅಮೂಲ್ಯ ಮೇಲೆ ದಾಳಿ ನಡೆಯುವ ಸಾಧ್ಯತೆಗಳಿರುವುದರಿಂದ ನ್ಯಾಯಾಲಯಕ್ಕೆ ಹಾಜರುಪಡಿಸದೇ ಮಂಗಲವಾರ ಮ್ಯಾಜಿಸ್ಟ್ರೇಟ್ ಅವರ ನಿವಾಸಕ್ಕೇ ವಿಚಾರಣೆಗೆ ಕರೆದೊಯ್ದಿದ್ದರು ಎಂದು ವರದಿಗಳು ತಿಳಿಸಿವೆ.
ಈ ನಡುವೆ ಬಸವೇಶ್ವರ ನಗರದಲ್ಲಿ ಅಮೂಲ್ಯ ಉಳಿದುಕೊಂಡಿದ್ದ ಪಿಜಿಗೂ ಪೊಲೀಸರು ಭೇಟಿ ನೀಡಿದ್ದು, ತಪಾಸಣೆ ನಡೆಸಿದರು. ಅಮೂಲ್ಯ ಉಳಿದುಕೊಂಡಿದ್ದ ಕೊಠಡಿಯಲ್ಲಿ ಕೆಲ ದಾಖಲೆಗಳು ಹಾಗೂ ಲೇಖನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಚಾರಣೆ ವೇಳೆ ಅಮೂಲ್ಯ ನಾವು ಕೇಳಿದ್ದ ಹಲವಾರು ಪ್ರಶ್ನೆಗಳಿಗೆ ಉತ್ತರವೇ ನೀಡಲಿಲ್ಲ. ತಾನು ಹೇಳಿದ್ದನ್ನೇ ಹಲವು ಬಾರಿ ಪದೇ ಪದೇ ಹೇಳುತ್ತಿದ್ದಳು. ನಾನು ಯಾವುದೇ ಅಪರಾಧ ಮಾಡಿಲ್ಲ. ಕಾರ್ಯಕ್ರಮ ಆಯೋಜರದ್ದೇ ತಪ್ಪು ಎಂದು ಹೇಳುತ್ತಿದ್ದಳು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಮೂಲ್ಯಳಂತೆಯೇ ದೇಶದ್ರೋಹ ಆರೋಪ ಎದುರಿಸುತ್ತಿರುವ ಆರ್ದ್ರಾ ಕೂಡ ಅಮೂಲ್ಯ ಉಳಿದುಕೊಂಡಿದ್ದ ಕೊಠಡಿಯಲ್ಲಿಯೇ ಇದ್ದಳು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದ್ದರೂ ಇಬ್ಬರೂ ರೂಮ್ ಮೇಟ್ ಗಳಾಗಿದ್ದರು ಎನ್ನಲಾಗಿದೆ.
ಜನರಿ ತಿಂಗಳಿನಲ್ಲಿ ಆರ್ದ್ರಾ ಬೇರೆ ಪಿಜಿಗೆ ಸ್ಥಳಾಂತರಗೊಂಡಿದ್ದಳು. ಅದಕ್ಕೂ ಮುನ್ನ ಹಲವು ವರ್ಷಗಳ ಕಾಲ ಇಬ್ಬರೂ ರೂಮ್ ಮೇಟ್ಸ್ ಗಳಾಗಿದ್ದರು. ವಾಟ್ಸ್ ಆಪ್ ಗಳಲ್ಲಿ ಇಬ್ಬರೂ ಸಂದೇಶಗಳನ್ನು ರವಾನಿಸುತ್ತಿದ್ದರು. ಸಿಎಎ ಪ್ರತಿಭಟನೆ ವೇಳೆ ಏನೇನು ಮಾಡಬೇಕೆಂಬುದನ್ನು ಇಬ್ಬರೂ ಚರ್ಚಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


