ಬಳ್ಳಾರಿ: ಜಾತಿ ವಿಚಾರಕ್ಕೆ ನಮ್ಮ ಪ್ರೀತಿ ವಿರೋಧಿಸಿದ್ರಿ, ನಮಗೆ ಈ ಬದುಕೆಬೇಡ, ಒಂದೇ ಮರಕ್ಕೆ ಪ್ರೇಮಿಗಳು ನೇಣು!
ಬೇರೆ ಜಾತಿ ಎಂಬ ಕಾರಣಕ್ಕೆ ಮನೆಯವರು ಪ್ರೇಮ ವಿವಾಹಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಹೊಸಪೇಟೆ: ಬೇರೆ ಜಾತಿ ಎಂಬ ಕಾರಣಕ್ಕೆ ಮನೆಯವರು ಪ್ರೇಮ ವಿವಾಹಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಹೂವಿನಹಡಗಲಿ ತಾಲೂಕಿನ ಹೊಳಗುಂದಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. 26 ವರ್ಷದ ನಿಂಗಮ್ಮ ಹಾಗೂ 30 ವರ್ಷದ ಗುರುರಾಜ್ ಎಂಬುವರು ಪ್ರೀತಿಸುತ್ತಿದ್ದರು. ಆದರೆ ಈ ಪ್ರೀತಿಗೆ ಪೋಷಕರು ವಿರೋಧಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿಂಗಮ್ಮ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಗ್ರಾಮದವರು. ಗುರುರಾಜ್ ಚಿಲುಗೋಡ್ ಗ್ರಾಮದ ಯುವಕ. ನಾಲ್ಕೈದು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಜಾತಿಯ ಕಾರಣಕ್ಕೆ ಮನೆಯವರು ಇವರಿಗೆ ಮದುವೆ ಮಾಡಲು ನಿರಾಕರಿಸಿದ್ದರು. ಈ ಹಿನ್ನೆಲೆ ಇಬ್ಬರು ರಾತ್ರಿ ಮನೆ ಬಿಟ್ಟು ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಹೂವಿನಹಡಗಲಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


