ಕುಂದಾಪುರ: ದೇವಸ್ಥಾನದಲ್ಲಿ 10 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ಕಳವು
ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬದಕೆರೆಯ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ 10 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬದಕೆರೆಯ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ 10 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬುಧವಾರ ತಡರಾತ್ರಿ ಈ ಘಟನೆ ಸಂಭವಿಸಿದೆ. ಗಮನಾರ್ಹ ಸಂಗತಿಯೆಂದರೆ ಕಳೆದ ಎರಡು ತಿಂಗಳಲ್ಲಿ ವರದಿಯಾದ ನಾಲ್ಕನೇ ಘಟನೆ ಇದಾಗಿದೆ.
ಕಳ್ಳರು ದೇವಾಲಯದ ಬೆಳ್ಳಿ ಬಾಗಿಲಿನ ಚೌಕಟ್ಟು ಮತ್ತು ಇತರ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ದೇವಾಲಯದಲ್ಲಿ ಅಳವಡಿಸಲಾದ 50,000 ರೂ ಮೌಲ್ಯದ ಸಿಸಿಟಿವಿ ಡಿವಿಆರ್ ಮತ್ತು ಎಲ್ಇಡಿ ಟಿವಿ ಸಹ ಕಾಣೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


