ಮಂಗಳೂರು: ರೈಲಿಗೆ ತಲೆಕೊಟ್ಟು ಪ್ರಿಯಕರ ಆತ್ಮಹತ್ಯೆ
ಪ್ರೇಯಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಆರೋಪಿಸಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಸೋಮೇಶ್ವರ ರೈಲು ನಿಲ್ದಾಣದಲ್ಲಿ ನಡೆದಿದೆ.

ಮಂಗಳೂರು: ಪ್ರೇಯಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಆರೋಪಿಸಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಸೋಮೇಶ್ವರ ರೈಲು ನಿಲ್ದಾಣದಲ್ಲಿ ನಡೆದಿದೆ.
ಬೆಳಗಾವಿಯ 23 ವರ್ಷದ ಸಮ್ಮದ್ ರಾಯಗೌಡ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರೇಯಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಡೆತ್ ನೋಟ್ ಬರೆದಿಟ್ಟು ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.
ರಾಯಗೌಡ ಮಂಗಳೂರಿನ ಉಳ್ಳಾಲ ಸೋಮೇಶ್ವರ ರೈಲ್ವೇ ನಿಲ್ದಾಣದಲ್ಲಿ ರೈಲು ಬರುವ ಮೊದಲೇ ಬಂದು ಕೂತಿದ್ದನು. ನಂತರ ರೈಲು ಬರುತ್ತಿದ್ದಂತೆ ಹಳಿಗೆ ಹಾರಿ ರೈಲಿನಡಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಾಹಿತಿ ತಿಳಿದು ಸ್ಥಳಕ್ಕೆ ಉಳ್ಳಾಲ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಆಗಮಿಸಿದ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


