ಬೆಳಗ್ಗೆ ವರ್ಗಾವಣೆ ರದ್ದು, ಸಂಜೆ ಐಪಿಎಸ್ ಅಧಿಕಾರಿ ಇಶಾ ಪಂತ್ ಮತ್ತೆ ವರ್ಗಾವಣೆ!
ಹಿರಿಯ ಐಪಿಎಸ್ ಅಧಿಕಾರಿ ಇಶಾ ಪಂತ್ ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿದ ಕೆಲವೇ ಗಂಟೆಗಳ ಅವಧಿಯಲ್ಲಿ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಇಶಾ ಪಂತ್ ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿದ ಕೆಲವೇ ಗಂಟೆಗಳ ಅವಧಿಯಲ್ಲಿ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಮಾಧ್ಯಮವೊಂದು ವರದಿ ಮಾಡಿದ್ದು, ಐಪಿಎಸ್ ಅಧಿಕಾರಿ ಇಶಾ ಪಂತ್ ಅವರನ್ನು ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ ಎಂದು ಹೇಳಲಾಗಿದೆ. ಆ ಮೂಲಕ ಕಳೆದ ಎರಡು ದಿನಗಳ ಅಂತರದಲ್ಲಿ ಇಶಾ ಪಂತ್ ಅವರನ್ನು ಎರಡು ಬಾರಿ ವರ್ಗಾವಣೆ ಮಾಡಲಾಗಿದೆ. ಫೆಬ್ರವರಿ 26 ರಂದು ಆಗ್ನೇಯ ವಿಭಾಗದ ಡಿಸಿಪಿ ಹುದ್ದೆಯಿಂದ ಸಿಐಡಿ, ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿತ್ತು.
ಈ ವರ್ಗಾವಣೆಗೆ ಇಂದು ಬೆಳಗ್ಗೆ ರಾಜ್ಯ ಸರ್ಕಾರ ತಡೆ ನೀಡಿ, ಆಗ್ನೇಯ ವಿಭಾಗದ ಡಿಸಿಪಿಯಾಗಿಯೇ ಇರಲು ಆದೇಶ ನೀಡಿತ್ತು. ಆದರೆ ಮಧ್ಯಾಹ್ನದ ವೇಳೆಗೆ ಮತ್ತೆ ಐಶಾ ಪಂತ್ ಅವರನ್ನು, ಬೆಂಗಳೂರು ಸಿಟಿಯ ಕಮಾಂಡೋ ಸೆಂಟರ್ ಡಿಸಿಪಿಯಾಗಿ ವರ್ಗಾವಣೆ ಮಾಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಇನ್ನು ಆಗ್ನೇಯ ವಿಭಾಗ ಡಿಸಿಪಿಯಾಗಿ ಜೋಶಿ ಶ್ರೀನಾಥ್ ಮಹದೇವ್ ನೇಮಕ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


