ತುಮಕೂರು: ಗೃಹಿಣಿ ಆತ್ಮಹತ್ಯೆ ಗೆ ಶರಣು
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ನೇಣಿಗೆ ಶರಣಾದ ಘಟನೆ ನಗರದ ಉಪ್ಪಾರಹಳ್ಳಿಯಲ್ಲಿ ನಡೆದಿದೆ.23 ವರ್ಷದ ಕಾವ್ಯ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಗುಬ್ಬಿ ಮೂಲದವರಾದ ಕಾವ್ಯ, ಕಳೆದ ನಾಲ್ಕು ವರ್ಷಗಳ ಹಿಂದೆ ಅಂಜನ್ ಎಂಬುವರೊಂದಿಗೆ ವಿವಾಹವಾಗಿದ್ದರು.

ತುಮಕೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ನೇಣಿಗೆ ಶರಣಾದ ಘಟನೆ ನಗರದ ಉಪ್ಪಾರಹಳ್ಳಿಯಲ್ಲಿ ನಡೆದಿದೆ.
23 ವರ್ಷದ ಕಾವ್ಯ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಗುಬ್ಬಿ ಮೂಲದವರಾದ ಕಾವ್ಯ, ಕಳೆದ ನಾಲ್ಕು ವರ್ಷಗಳ ಹಿಂದೆ ಅಂಜನ್ ಎಂಬುವರೊಂದಿಗೆ ವಿವಾಹವಾಗಿದ್ದರು.
ಪತಿ ಅಂಜನ್ ವರದಕ್ಷಿಣೆಗಾಗಿ ಕಾವ್ಯಗೆ ಪೀಡಿಸುತ್ತಿದ್ದು ಇದರಿಂದ ಬೇಸತ್ತು ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಎಂದು ಆಕೆಯ ಪೋಷಕರು ದೂರಿದ್ದಾರೆ.
ಶುಕ್ರವಾರ ತಡರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಾವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಘಟನೆ ಗೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


