ಮೈಸೂರು: ನಂಜನಗೂಡಿನಲ್ಲಿ ಇಬ್ಬರು ಬಾಂಗ್ಲಾದ ಅಕ್ರಮ ವಲಸಿಗರ ಬಂಧನ
ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ಬಾಂಗ್ಲಾದೇಶದ ಇಬ್ಬರು ಅಕ್ರಮ ವಲಸಿಗರನ್ನು ಪೊಲೀಸರು ಇಂದು ಬಂಧಿಸಿದ್ದಾರೆ

ಮೈಸೂರು: ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ಬಾಂಗ್ಲಾದೇಶದ ಇಬ್ಬರು ಅಕ್ರಮ ವಲಸಿಗರನ್ನು ಪೊಲೀಸರು ಇಂದು ಬಂಧಿಸಿದ್ದಾರೆ
ಬಂಧಿತರನ್ನು ಬಾಂಗ್ಲಾ ದೇಶದ ಸಾತ್ಕೀರಾದ ಮೊಹಮದ್ ಅಬ್ದುಲ್ಲಾ ಹಾಗೂ ಮೊಹಮದ್ ಹಬೀಬುಲ್ಲಾ ಎಂದು ಗುರುತಿಸಲಾಗಿದೆ.
ಇಬ್ಬರೂ ನಂಜನಗೂಡಿನ ಹಿಮ್ಮಾವು ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಖಚಿತ ಸುಳಿವಿನ ಮೇಲೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಯ ವೇಳೆ ಬಾಂಗ್ಲಾದೇಶದಿಂದ ವಲಸೆ ಬಂದಿರುವ ಅಂಶವನ್ನು ಬಾಯಿಬಿಟ್ಟಿದ್ದಾರೆ.
ಕೆಲ ಕಾಲ ಬೆಂಗಳೂರು ನಗರದಲ್ಲಿ ವಾಸವಾಗಿದ್ದ ಬಂಧಿತರು ವರ್ಷದ ಹಿಂದೆ ನಂಜನಗೂಡಿಗೆ ಸ್ಥಳಾಂತರಗೊಂಡಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


