ಜಮೀನಿನಲ್ಲಿ ಟ್ರ್ಯಾಕ್ಟರ್ ಹಾದು ಹೋಗಿದ್ದಕ್ಕೆ ಬಿತ್ತು ಹೆಣ
ಕ್ಷುಲ್ಲಕ ಕಾರಣಕ್ಕೆ ರೈತರ ನಡುವೆ ಹಲವಾರು ದಿನಗಳಿಂದ ಎದ್ದಿದ್ದ ತಕರಾರು ಓರ್ವನ ಕೊಲೆಯೊಂದಿಗೆ ಅಂತ್ಯಗೊಂಡಿದೆ. ಸದ್ಯ ಕೊಲೆ ಆರೋಪಿಯನ್ನು ವಶಕ್ಕೆ ಪಡೆದು ಚಾಮರಾಜನಗರ ಗ್ರಾಮಾಂತರ ಪಿಎಸ್ಐ ಲೋಹಿತ್ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಾಮರಾಜನಗರ: ಕ್ಷುಲ್ಲಕ ಕಾರಣಕ್ಕೆ ರೈತರ ನಡುವೆ ಹಲವಾರು ದಿನಗಳಿಂದ ಎದ್ದಿದ್ದ ತಕರಾರು ಓರ್ವನ ಕೊಲೆಯೊಂದಿಗೆ ಅಂತ್ಯಗೊಂಡಿದೆ. ಸದ್ಯ ಕೊಲೆ ಆರೋಪಿಯನ್ನು ವಶಕ್ಕೆ ಪಡೆದು ಚಾಮರಾಜನಗರ ಗ್ರಾಮಾಂತರ ಪಿಎಸ್ಐ ಲೋಹಿತ್ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ.ಕೊತ್ತಲವಾಡಿ ಗ್ರಾಮದ ಪುಟ್ಟಸ್ವಾಮಯ್ಯ (65) ಕೊಲೆಯಾದ ದುರ್ದೈವಿ. ಅದೇ ಗ್ರಾಮದ ಸ್ವಾಮಿ (55) ಎಂಬಾತ ಪುಟ್ಟಸ್ವಾಮಯ್ಯರ ಜಮೀನಿನಲ್ಲಿ ಟ್ರ್ಯಾಕ್ಟರ್ ಚಲಾಯಿಸಿದ್ದರಿಂದ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದೆ.
ಕುಪಿತಗೊಂಡಿದ್ದ ಸ್ವಾಮಿ ಕಲ್ಲಿನಲ್ಲಿ ಹಲ್ಲೆ ನಡೆಸಿದ್ದರಿಂದ ಪುಟ್ಟಸ್ವಾಮಯ್ಯರ ಎದೆಮೂಳೆಗಳು ಮುರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಇವರಿಬ್ಬರೂ ಅಕ್ಕಪಕ್ಕದ ಜಮೀನಿನವರಾಗಿದ್ದಾರೆ. ಅಳತೆ ವಿಚಾರವಾಗಿ ಹಲವಾರು ದಿನಗಳಿಂದ ತಕರಾರು ಎದ್ದಿತ್ತು ಎಂದು ತಿಳಿದು ಬಂದಿದೆ. ಸದ್ಯ ಆರೋಪಿ ಸ್ವಾಮಿಯನ್ನು ವಶಕ್ಕೆ ಪಡೆದು ಚಾಮರಾಜನಗರ ಗ್ರಾಮಾಂತರ ಪಿಎಸ್ಐ ಲೋಹಿತ್ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


