ಚಿತ್ರದುರ್ಗ: ಆಕಸ್ಮಿಕ ಬೆಂಕಿ ಅವಘಡ; ಒಂದೇ ಕುಟುಂಬದ ಮೂವರು ಸಜೀವ ದಹನ
ಇದ್ದಕ್ಕಿದ್ದಂತೆ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಿಸಿರುವ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಚಿತ್ರದುರ್ಗ: ಇದ್ದಕ್ಕಿದ್ದಂತೆ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಿಸಿರುವ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಚಿತ್ರದುರ್ಗ ನಗರದ ಗಾರೆಹಟ್ಟಿಯಲ್ಲಿ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಸುಟ್ಟು ಭಸ್ಮವಾಗಿದ್ದಾರೆ. ಅರುಣ್ ಕುಮಾರ್ (43), ಪತ್ನಿ ಲತಾ (35), ಮಗಳು ಅಮೃತಾ (13) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಅಕ್ಕಪಕ್ಕದವರು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ.
ಘಟನೆಗೆ ನಿಖರವಾದ ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ. ಮನೆಯಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ನೆರೆಹೊರೆಯವರಿಂದ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದು ಈ ದುರ್ಘಟನೆ ಸಂಭವಿಸಿದೆಯೋ ಅಥವಾ ಉದ್ದೇಶಪೂರ್ವಕವಾಗಿ ನಡೆದ ಘಟನೆಯೋ ಎಂಬುದು ತನಿಖೆ ನಂತರ ಬೆಳಕಿಗೆ ಬರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


