ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ಸು ಅಪಘಾತ: ಹತ್ತು ಮಕ್ಕಳಿಗೆ ಗಾಯ
ಪ್ರವಾಸಕ್ಕೆಂದು ಹೊರಟಿದ್ದ ಶಾಲಾ ಮಕ್ಕಳಿದ್ದ ಖಾಸಗಿ ಬಸ್ಸೊಂದು ಮರಕ್ಕೆ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.

ಕಲಬುರಗಿ: ಪ್ರವಾಸಕ್ಕೆಂದು ಹೊರಟಿದ್ದ ಶಾಲಾ ಮಕ್ಕಳಿದ್ದ ಖಾಸಗಿ ಬಸ್ಸೊಂದು ಮರಕ್ಕೆ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.
ಚಾಲಕನ ನಿಯಂತ್ರಣ ತಪ್ಪಿ ಬಸ್ಸು, ನಗರದ ವೆಂಕಟಗಿರಿ ಹೋಟೆಲ್ ಬಳಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಗಳೆಲ್ಲರೂ ಕಲಬುರಗಿ ನಗರದ ಚನ್ನವೀರ ನಗರ ಅಯ್ಯಪ್ಪ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


