ಸಿದ್ದಗಂಗಾ ಮಠದಲ್ಲಿ ಗದ್ದುಗೆ ಪೂಜೆ ನೆರವೇರಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಲ್ಲಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಪೂಜೆ ನೆರವೇರಿಸಿದರು.

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಲ್ಲಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಪೂಜೆ ನೆರವೇರಿಸಿದರು.
ನಂತರ ತಮ್ಮ ಭೇಟಿಯ ಸ್ಮರಣಾರ್ಥ ಮಠದ ಆವರಣದಲ್ಲಿ ಬಿಲ್ವಪತ್ರೆ ಗಿಡ ನೆಟ್ಟು ನೀರೆರೆದರು. ಅಲ್ಲದೆ ಲಿಂಗೈಕ್ಯ ಶಿವಕುಮಾರ ಶ್ರೀಗಳ ವಸ್ತು ಸಂಗ್ರಹಾಲಯ ಶಂಕುಸ್ಥಾಪನೆ ನೆರವೇರಿಸಿದರು. ಜನವರಿ 21 ರಂದು ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಪುಣ್ಯಾರಾಧನೆ ನಡೆಯಲಿದ್ದು, ಅದರಲ್ಲಿ ಪಾಲ್ಗೊಳ್ಳುವಂತೆ ಪ್ರಧಾನ ಮೋದಿ ಅವರನ್ನು ಆಹ್ವಾನಿಸಲಾಗಿತ್ತು.
ಆದರೆ, ಗಣರಾಜ್ಯೋತ್ಸವ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮೋದಿ ಮುಂಚಿತವಾಗಿಯೇ ಮಠಕ್ಕೆ ಆಗಮಿಸಿ ಸ್ವಾಮೀಜಿಯವರ ಗದ್ದುಗೆ ಪೂಜೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ,ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡ ಸಂಸದೀಯ ವ್ಯವಹಾರಗಳು,ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್ ಜ್ಯೋಷಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸರ್ಕಾರದ ಕಾನೂನು ,ಸಂಸದೀಯ ವ್ಯವಹಾರಗಳು ,ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ,ವಸತಿ ಹಾಗೂ ತೋಟಗಾರಿಕೆ ಸಚಿವ ವಿ ಸೋಮಣ್ಣ, ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


