ರಾಜ್ಯ

ಬೈಕ್ ಗಳ‌ ಮುಖಾಮುಖಿ ಡಿಕ್ಕಿ; ಇಬ್ಬರು ದುರ್ಮರಣ

ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗೇಟ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಅಪಘಾತಕ್ಕೀಡಾಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೈಕ್ ಗಳ‌ ಮುಖಾಮುಖಿ ಡಿಕ್ಕಿ; ಇಬ್ಬರು ದುರ್ಮರಣ
Published On :

ಮಂಡ್ಯ: ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗೇಟ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಜಿಗೆರೆಯ ಸ್ವಾಮಿಗೌಡ (55) ,ಮಾಚಗೋನಹಳ್ಳಿಯ ಕುಮಾರ್ (45) ಮೃತರಾದ ದುರ್ದೈವಿಗಳು.
 
ಘಟನೆಯಲ್ಲಿ ಓರ್ವ ಮಹಿಳೆ ಹಾಗೂ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಗಂಜಿಗೆರೆಕೊಪ್ಪಲು ಗ್ರಾಮದ ಸ್ವಾಮಿಗೌಡ ಅವರು ತಮ್ಮ ಪುತ್ರಿ ರೇಷ್ಮಾ ಹಾಗೂ ಮೊಮ್ಮಗ ಉದಯ್ ಅವರೊಂದಿಗೆ ಹೀರೋಹೋಂಡಾ ಬೈಕಿನಲ್ಲಿ ಊರಿಗೆ ಹೋಗುತ್ತಿದ್ದಾಗ ಎದುರಿನಿಂದ ಮತ್ತೊಂದು ಬೈಕಿನಲ್ಲಿ ಬಂದ ಮಾಚಗೋನಹಳ್ಳಿಯ ಕುಮಾರ್ ಮುಖಾಮುಖಿ ಡಿಕ್ಕಿಹೊಡೆದಾಗ ಇಬ್ಬರೂ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ವಾಮಿಗೌಡರ ಮಗಳು ರೇಷ್ಮಾ ಅವರ ತಲೆಗೆ ಪೆಟ್ಟು ಬಿದ್ದಿದ್ದರೆ ಉದಯ್ ಅವರ ಬಲಗಾಲು ಮುರಿದಿದೆ. ಸಬ್ ಇನ್ಸ್ ಪೆಕ್ಟರ್ ಲಕ್ಷ್ಮಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಪಟ್ಟಣದ ದುಂಡಶೆಟ್ಟಿಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಘಟನೆಯ ಬಗ್ಗೆ ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ನಾಗಯ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.