ರಾಜ್ಯ

ಸಂವಿಧಾನ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಚಳವಳಿ ಅಗತ್ಯ; ರಮಾನಾಥ ರೈ

ದೇಶದ ಸಂವಿಧಾನ ವಿರೋಧಿಯಾದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಕೇಂದ್ರದ ಸರಕಾರದ ವಿರುದ್ಧ ದೇಶದ ಎಲ್ಲಾ ವರ್ಗಗಳ ಜನರು ಎರಡನೆ ಸ್ವಾತಂತ್ರ ಚಳವಳಿ ನಡೆಸುವುದು ಅಗತ್ಯವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಸಂವಿಧಾನ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಚಳವಳಿ ಅಗತ್ಯ; ರಮಾನಾಥ ರೈ
ಸಂಗ್ರಹ ಚಿತ್ರ
Published On :

ಮಂಗಳೂರು: ದೇಶದ ಸಂವಿಧಾನ ವಿರೋಧಿಯಾದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಕೇಂದ್ರದ ಸರಕಾರದ ವಿರುದ್ಧ ದೇಶದ ಎಲ್ಲಾ ವರ್ಗಗಳ ಜನರು ಎರಡನೆ ಸ್ವಾತಂತ್ರ ಚಳವಳಿ ನಡೆಸುವುದು ಅಗತ್ಯವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಡಿ.19ರಂದು ಮಂಗಳೂರಿನಲ್ಲಿ ನಡೆದ ಪೊಲೀಸ್ ಗೋಲಿಬಾರ್, ಘರ್ಷಣೆ ಪ್ರಕರಣವನ್ನು ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಇಂದು ಪುರಭವನದ ಅಂಬೇಡ್ಕರ್ ಪ್ರತಿಮೆಯ ಎದುರು ಏರ್ಪಡಿಸಿದ್ದ ಒಂದು ದಿನದ ಸಾಮೂಹಿಕ ಧರಣಿ ಉದ್ದೇಶಿಸಿ ಅವರು ಮಾತನಾಡಿದರು.

ಮಂಗಳೂರಿನಲ್ಲಿ ಡಿ. 19ರಂದು ನಡೆದ ಘಟನೆಗೆ ಸರಕಾರವೇ ನೇರ ಕಾರಣ. ಯಾವುದೇ ಪ್ರಚೋದನೆ ಇಲ್ಲದಿದ್ದರೂ ಏಕಾಏಕಿ ಪ್ರತಿಭಟನಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದರು. ಇದು ಸರಕಾರದ ಪೂರ್ವ ನಿಯೋಜಿತ ಕೃತ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹ ಸಚಿವರೇ ಇದಕ್ಕೆ ನೇರ ಹೊಣೆ ಎಂದು ರೈ ಆಪಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.