ರಾಜ್ಯ

ತುಂಗಾರತಿಗೆ ಸಕಲ ಸಿದ್ಧತೆ ಪೂರ್ಣ

ಹಂಪಿ ಉತ್ಸವದ ನಿಮಿತ್ತ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ವಿಶ್ವವಿಖ್ಯಾತ ತುಂಗಾರತಿಗೆ ತುಂಗಭದ್ರ ನದಿ ದಡ ನವ ವಧುವಿನಂತೆ ಸಿಂಗಾರಗೊಳ್ಳುತ್ತಿದೆ.

ತುಂಗಾರತಿಗೆ ಸಕಲ ಸಿದ್ಧತೆ ಪೂರ್ಣ
ತುಂಗಾರತಿಗೆ ಸಕಲ ಸಿದ್ಧತೆ
Published On :

ಹೊಸಪೇಟೆ: ಹಂಪಿ ಉತ್ಸವದ ನಿಮಿತ್ತ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ವಿಶ್ವವಿಖ್ಯಾತ ತುಂಗಾರತಿಗೆ ತುಂಗಭದ್ರ ನದಿ ದಡ ನವ ವಧುವಿನಂತೆ ಸಿಂಗಾರಗೊಳ್ಳುತ್ತಿದೆ.

ಜನವರಿ 10 ಮತ್ತು 11ರಂದು ನಡೆಯಲಿರುವ ಹಂಪಿ ಉತ್ಸವದ ನಿಮಿತ್ತ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಎಡ ಬಾಗದಲ್ಲಿರುವ ತುಂಗಭದ್ರ ನದಿ ತೀರದಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ. ನಾಳೆ ಸಂಜೆ ಆರು ಗಂಟೆ ಸುಮಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಮತ್ತು ಶಾಸಕ ಆನಂದ್ ಸಿಂಗ್ ಸೇರಿದಂತೆ ಹಲವು ಗಣ್ಯಮಾನ್ಯರು ಬಾಗಿಯಾಗಿ ತುಂಗಭದ್ರ ತಾಯಿಗೆ ಪೂಜೆ ಸಲ್ಲಿಸಲಿದ್ದಾರೆ.

ಇನ್ನುಮುಖ್ಯಮಂತ್ರಿಗಳು ಉತ್ಸವದ ಉದ್ಘಾಟನೆ ಮಾಡಲಿದ್ದು, ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಸೇರಿದಂತೆ ಅನೇಕ ಸಚಿವರು ಹಾಗೂ ಶಾಸಕರು ಅತಿಥಿಗಳಾಗಿ ಆಗಮಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.