ಬೆಂಗಳೂರಿನಲ್ಲಿಂದು ಆಶಾ ಕಾರ್ಯಕರ್ತೆಯರ ಧರಣಿ, ಹಲವೆಡೆ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ
ನಗರದಲ್ಲಿ ಶುಕ್ರವಾರ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದು ಸಂಚಾರ ದಟ್ಟಣೆ ತೀವ್ರವಾಗಿದೆ.

ಬೆಂಗಳೂರು: ನಗರದಲ್ಲಿ ಶುಕ್ರವಾರ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದು ಸಂಚಾರ ದಟ್ಟಣೆ ತೀವ್ರವಾಗಿದೆ.
ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೆಳಗ್ಗೆ 11 ಗಂಟೆಗೆ ಜಾಥಾ ಆರಂಭಿಸಿ ಇದೀಗ ಆಶಾ ಕಾರ್ಯಕರ್ತೆಯರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಆಗಮಿಸುತ್ತಿದ್ದು ದಾರಿಯುದ್ದಕ್ಕೂ ಸಂಚಾರ ದಟ್ಟಣೆ ತೀವ್ರವಾಗಿದೆ. ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿ ಪ್ರಯಾಣಿಕರು ಪರಿತಪಿಸುತ್ತಿದ್ದಾರೆ.
ತಮ್ಮ ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಧರಣಿ ನಡೆಸಲು ಆಶಾ ಕಾರ್ಯಕರ್ತೆಯರು ತೀರ್ಮಾನಿಸಿದ್ದಾರೆ. ಕಳೆದ ವರ್ಷವೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದಾಗ ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಇದುವರೆಗೆ ಬೇಡಿಕೆ ಈಡೇರಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.
ಪ್ರತಿಭಟನೆಯಲ್ಲಿ ಸುಮಾರು ಸುಮಾರು 30 ಸಾವಿರದಷ್ಟು ಕಾರ್ಯಕರ್ತೆಯರು ಆಗಮಿಸಿದ ಕಾರಣ ನಗರದ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೆ ಸಂಚಾರ ದಟ್ಟಣೆ ಉಂಟಾಗಿತ್ತು. ಈ ವೇಳೆ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡಬೇಕಾಯಿತು. ಕಾರ್ಯಕರ್ತೆಯರಿಂದ ಫ್ರೀಡಂ ಪಾರ್ಕ್ ಬಳಿ ರಸ್ತೆ ತುಂಬಿ ತುಳುಕುತ್ತಿದೆ.
ಕೆ ಆರ್ ಮಾರ್ಕೆಟ್, ಕಲಾಸಿಪಾಳ್ಯ, ಮೇಕ್ರಿ ಸರ್ಕಲ್, ಶಿವಾಜಿ ನಗರ, ಫ್ರೀಡಂ ಪಾರ್ಕ್ ಸುತ್ತಮುತ್ತ, ವಿಧಾನ ಸೌಧ, ಮೆಜೆಸ್ಟಿಕ್, ಮಲ್ಲೇಶ್ವರ, ರಾಜಾಜಿನಗರ ಹೀಗೆ ಬೆಂಗಳೂರಿನ ಅರ್ಧ ಭಾಗದಷ್ಟು ಕಡೆಗಳಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಬಿಸಿ ತಟ್ಟಿದೆ.
ಆಶಾ ಕಾರ್ಯಕರ್ತೆಯರ ಬೇಡಿಕೆಗಳೇನೇನು?: ಮಾಸಿಕ ಗೌರವಧನ 12 ಸಾವಿರ ರೂ. ನಿಗದಿ ಮಾಡಬೇಕು, ಕಳೆದ 14 ತಿಂಗಳಿನಿಂದ ಕೇಂದ್ರದ ಪ್ರೋತ್ಸಾಹ ಧನ ಎಂಸಿಟಿಎಸ್ ನಲ್ಲಿ ದಾಖಲಾಗಿರುವುದು ಬಾಕಿ ಇದ್ದು, ಇದನ್ನು ಸರಿಪಡಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಆಶಾ ಕಾರ್ಯಕರ್ತೆಯರು ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


